ವಿಟ್ಲ: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು, ವಿಟ್ಠಲ ವಿದ್ಯಾ ಸಂಘ ವಿಟ್ಲ, ವಿಟ್ಠಲ ಪದವಿ ಪೂರ್ವ ಕಾಲೇಜು ವಿಟ್ಲ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟವು ಅ.29ರಂದು ಶನಿವಾರ ವಿಟ್ಠಲ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.

ಈ ಪಂದ್ಯಾಟವನ್ನು ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಪುತ್ತೂರು ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಯ ಮಹಿಳಾ ಕಾನ್ಸೆಸ್ಟೇಬಲ್ ಗಾಯತ್ರಿ ಎ ಉದ್ಘಾಟಿಸಿ ಶುಭ ಹಾರೈಸಿದರು. ವಿಟ್ಠಲ ವಿದ್ಯಾ ಸಂಘದ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ ಕ ಜಿಲ್ಲಾ ಕ್ರೀಡಾ ಸಂಯೋಜಕ ಅರುಣ್ ಡಿ ಸೋಜಾ ಮತ್ತು ವಿಟ್ಠಲ ವಿದ್ಯಾ ಸಂಘದ ಸಂಚಾಲಕ ಎಲ್ ಎನ್ ಕೂಡೂರು ಭಾಗವಹಿಸಿದ್ದರು.

ಕಾರ್ಯದರ್ಶಿ ರಾಧಾಕೃಷ್ಣ ನಾಯಕ್, ಕೋಶಾಧಿಕಾರಿ ಬಾಬು ಕೆ ವಿ, ಆಡಳಿತಾಧಿಕಾರಿ ಪ್ರಶಾಂತ್ ಚೊಕ್ಕಾಡಿ, ಸದಸ್ಯರುಗಳಾದ ನಿತ್ಯಾನಂದ ನಾಯಕ್, ಪದ್ಮಯ್ಯ ಗೌಡ, ಸದಾಶಿವ ಬನ, ಉಪ ಪ್ರಾಂಶುಪಾಲ ಕಿರಣ್ ಕುಮಾರ್ ಬ್ರಹ್ಮಾವರ್, ಉಪನ್ಯಾಸಕರು ಹಾಗೂ ಕ್ರೀಡಾಪಟುಗಳು ಉಪಸ್ಥತರಿದ್ದರು. ಪ್ರಾಂಶುಪಾಲ ಆದರ್ಶ ಚುಕ್ಕಾಡಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ್ ವಂದಿಸಿದರು. ಉದಯ ನಾಯಕ್ ನಿರೂಪಿಸಿದರು. ಆಶಾ ಸಹಕರಿಸಿದರು.

By suddi9

Leave a Reply

Your email address will not be published. Required fields are marked *