೬೭ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ
ಕಲ್ಲಡ್ಕ: ಅ.೨೮ರಂದು ೬೭ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ, ಕನ್ನಡ ಸಂಸ್ಕೃತಿ ಇಲಾಖೆ ನಡೆಸಿದಂತಹ ಕೋಟಿ ಕಂಠ ಗಾಯನದಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ೧೩೧೭ ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಕೇತರರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಮಾತೃಭಾರತಿ ಸದಸ್ಯರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಭಾಗವಹಿಸಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಮಾತಾನಾಡುತ್ತಾ, “ನಮ್ಮ ಸಂಸ್ಕೃತಿ, ಜೀವನ ಮೌಲ್ಯಗಳನ್ನು ಸುಲಭವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದು ಮಾತೃಭಾಷೆಯಲ್ಲಿ.ನಮ್ಮ ಭಾಷೆಯ ಮುಖಾಂತರ ಹೇಳಿದಾಗ ಬಹುಬೇಗನೆ ಅರ್ಥವಾಗುತ್ತದೆ.ಇಂದು ಬೇರೆ ಬೇರೆ ಸಾಹಿತಿಗಳು ಬರೆದಿರುವ ಹಾಡನ್ನು ಹಾಡುವುದರ ಮೂಲಕನಮ್ಮ ಭಾಷೆಯ ಮೇಲೆ ಇನ್ನಷ್ಟುಅಭಿಮಾನ ಬರಲಿ. ಸ್ವಾಭಿಮಾನ ನಿರ್ಮಾಣವಾಗಲಿ” ಎನ್ನುವಆಶಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕದ ನಾಡಗೀತೆ ಆದಂತಹ ಜೈ ಭಾರತ ಜನನಿಯ ತನುಜಾತೆ, ಬಾರಿಸು ಕನ್ನಡ ಡಿಂಡಿಮವ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು, ವಿಶ್ವವಿನೂತನ ವಿದ್ಯಾಚೇತನ ಹಾಗೂ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡುಎನ್ನುಒಟ್ಟು ೫ ಗೀತೆಗಳನ್ನು ಎಲ್ಲಾ ವಿದ್ಯಾರ್ಥಿಗಳು ಒಟ್ಟು ಸೇರಿ ಹಾಡಲಾಯಿತು.

ನಂತರ ಪ್ರತಿಜ್ಞಾವಿಧಿ ಭೋದಿಸಲಾಯಿತು.೭ನೇ ತರಗತಿಯರಮ್ಯ ಪ್ರತಿಜ್ಞಾ ವಿಧಿ ಭೋದಿಸಿದರು. ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ್ ಸಾಲ್ಯಾನ್, ಶಾಲಾ ಶೈಕ್ಷಣಿಕ ಪರಿವೀಕ್ಷಕರಾದ ಮಲ್ಲಿಕಾ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಅಂಕಿತ ಸ್ವಾಗತಿಸಿ, ಪವನ್ ನಾಯಕ್ ನಿರೂಪಿಸಿದನು. ದಕ್ಷ ವಂದಿಸಿದರು.
