ಆರೋಗ್ಯ ವಂತ ಸಮಾಜ ನಿರ್ಮಾಣ ದಲ್ಲಿ ಮಾಧ್ಯಮಗಳ ಹೊಣೆಗಾರಿಕೆ ಮಹತ್ವದ್ದು -ಡಾ.ಕುಮಾರ್, ಭಾರತೀಯ ಪತ್ರಕರ್ತರ ಒಕ್ಕೂಟದ 73ನೆಸಂಸ್ಥಾಪನಾ ದಿನಾಚರಣೆ
ಮಂಗಳೂರು: ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಮಾಧ್ಯಮಗಳ ಹೊಣೆಗಾರಿಕೆ ಮಹತ್ವದ್ದಾಗಿದೆ ಎಂದು ದ.ಕ ಜಿಲ್ಲಾಧಿಕಾರಿ (ಪ್ರಭಾರ ) ಮತ್ತು ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹ ಣಾಧಿಕಾರಿ ಡಾ.ಕುಮಾರ್ ತಿಳಿಸಿದ್ದಾರೆ.
ಅವರು ಇಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ವತಿಯಿಂದ ನಗರದ ಪತ್ರಿಕಾ ಭವನದಲ್ಲಿಂದು ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟ (ಐಡಬ್ಲ್ಯುಎಫ್ ಜೆ )ಇದರ 73ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಪ್ರಜಾಪ್ರಭುತ್ವ ದಲ್ಲಿ ನಾಲ್ಕನೇ ಅಂಗವೆಂದು ಸ್ಥಾನ ಪಡೆದ ಮಾಧ್ಯಮಕ್ಕೆ ಸಮಾಜವನ್ನು ತಿದ್ದುವ ಮಹತ್ವದ ಜವಾಬ್ದಾರಿ ಇದೆ. ಸಮಾಜದ ಮಹತ್ವದ ಅಂಗವಾದ ಪತ್ರಿಕೋದ್ಯಮ ತನ್ನ ವೃತ್ತಿಯ ಪಾವಿತ್ರ್ಯತೆ ಯನ್ನು ಉಳಿಸಿ ಕೊಳ್ಳಬೇಕಾದ ಅಗತ್ಯವಿದೆ.
ಖಡ್ಗ ಗಿಂತ ಲೇಖನಿ ಹರಿತವಾದುದು. ಪತ್ರಿಕಾ ವೃತ್ತಿಗೆ ಅಧ್ಯಯನ ಶೀಲತೆ ಅಗತ್ಯವಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ದ ಚಲಾವಣೆ ಯ ಸಂದರ್ಭದಲ್ಲಿ ನಮ್ಮ ಅಂತರಂಗದ ಸ್ವಾತಂತ್ರ್ಯ ವನ್ನು ಒತ್ತೆ ಇಡಬಾರದು.ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಪ್ಲಾಸ್ಟಿಕ್ ವಿರುದ್ಧ ಜಾಗೃತಿ ಕಾರ್ಯಕ್ರ ಮ ದಂತಹ ಸಾಕಷ್ಟು ಕಾರ್ಯ ಕ್ರಮಗಳ ಮೂಲಕ ಮಾದರಿ ಯಾಗಿದ್ದಾರೆ ಎಂದು ಡಾ.ಕುಮಾರ್ ಶ್ಲಾಘಿಸಿದರು.
ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಮಂಡಳಿಯ ಸದಸ್ಯ ಪಿ.ಬಿ.ಹರೀಶ್ ರೈ,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಸಮಾ ರಂಭದ ಅಧ್ಯಕ್ಷ ತೆ ವಹಿಸಿದ್ದರು. ಮುಖ್ಯ ಉಪನ್ಯಾಸಕರರಾಗಿ ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್ ಭಾಗವಹಿಸಿದ್ದರು.
ಸಂಘದ ಪದಾಧಿ ಕಾರಿಗಳಾದ ವಿಜಯ ಕೋಟ್ಯಾನ್ ಪಡು ಕಾರ್ಯಕ್ರಮ ನಿರೂಪಿಸಿ ದರು. ಪುಷ್ಪ ರಾಜ್ ಬಿ.ಎನ್ ವಂದಿಸಿದರು. ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ, ಪತ್ರ ಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಮೊದ ಲಾದ ವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾ ದ ಮನೋಹರ ಪ್ರಸಾದ್ ಸಮಕಾಲೀನ ಪತ್ರಿಕೋದ್ಯಮದ ಬಗ್ಗೆ ಉಪನ್ಯಾಸ ನೀಡಿದರು.