ಖಡಕ್ ಅಧಿಕಾರಿಯಾಗಿ ಜನಮನ್ನಣೆ ಗಳಿಸಿದ್ದ ರವಿಕುಮಾರ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಕ
ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ರವಿಕುಮಾರ್ ಎಂ.ಆರ್. ಅವರು ಹತ್ತು ಹಲವು ರಸ್ತೆಗಳನ್ನು ಅಗಲೀಕರಣಗೊಳಿಸುವ ಮೂಲಕ ಬೆಳಗಾವಿ ಮಹಾನಗರದ ಸೌಂದರ್ಯೀಕರಣಕ್ಕೆ ಒತ್ತು ನೀಡಿದ್ದರು. ಯಾವುದೇ ಒತ್ತಡ ಬಂದರೂ ಅದಕ್ಕೆ ಮಣಿಯದೆ ರಸ್ತೆ ಅಗಲೀಕರಣಕ್ಕೆ ಮುಂದಾಗಿದ್ದು ಇತಿಹಾಸ.
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಈ ಮೊದಲು ಜಿಲ್ಲಾಧಿಕಾರಿಯಾಗಿದ್ದ ಡಾ.ರಾಜೇಂದ್ರ ಕೆ.ವಿ. ವರ್ಗಾವಣೆಯಾದ ನಂತರ ಅವರ ಸ್ಥಾನಕ್ಕೆ ರಾಜ್ಯ ಸರಕಾರ ಇದೀಗ ರವಿಕುಮಾರ್ ಅವರನ್ನು ನೇಮಕ ಮಾಡಿದೆ.
ರವಿಕುಮಾರ್ 2012 ರ ಬ್ಯಾಚಿನ ಕರ್ನಾಟಕ ಕೇಡರ್ ಐಎಎಸ್ ಆಗಿದ್ದು ಆರ್ ಜಿಯುಎಚ್ ಎಸ್ ರಿಜಿಸ್ಟರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಸೂಚನೆ ನೀಡಿದೆ.
ರವಿಕುಮಾರ್ ಈ ಮೊದಲು ಕೆಲ ವರ್ಷಗಳ ಹಿಂದೆ ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಆಯುಕ್ತರಾಗಿದ್ದಾಗ ಅವರು ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಹಲವಾರು ರಸ್ತೆಗಳ ಅಗಲೀಕರಣಕ್ಕೆ ಹಸಿರು ನಿಶಾನೆ ತೋರಿದ್ದರು. ಯಾವುದೇ ಒತ್ತಡಕ್ಕೆ ಮಣಿಯದೆ ಬೆಳಗಾವಿ ಮಹಾನಗರದ ರಸ್ತೆಗಳ ಅಗಲೀಕರಣಕ್ಕೆ ಅವರು ಶ್ರಮಿಸಿದ್ದರು. ಬೆಳಗಾವಿಯಲ್ಲಿ
ಇಂದಿಗೂ ಅವರು ಖಡಕ್ ಅಧಿಕಾರಿ ಎಂದೇ ಜನಪ್ರಿಯತೆ ಗಳಿಸಿದ್ದಾರೆ.