Published On: Wed, Nov 2nd, 2022

ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ನಾಳೆಯೇ ಭೂಮಿ ಪೂಜೆ: ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲೇ ಶಿಲಾನ್ಯಾಸ

ಸುಳ್ಯ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯ ನಂತರ ಆತನ ಕುಟುಂಬಕ್ಕೆ ಮನೆ ಕಟ್ಟಿ ಕೊಡುವ ಭರವಸೆ ನೀಡಿದ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಯೋಜನೆಗೆ ಈಗ ಅಡಿಗಲ್ಲು ಹಾಕುವಂತಹ ಸಮಯ ಬಂದಿದೆ.

ನವೆಂಬರ್ 2 ರಂದು ಪ್ರವೀಣ್ ನೆಟ್ಟಾರ್ ಅವರ ಕುಟುಂಬಕ್ಕೆ ಮನೆ ನಿರ್ಮಿಸಲು ಭೂಮಿ ಪೂಜೆ ನೆರವೇರಲಿದ್ದು ಖುದ್ದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೇ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಾತ್ರವಲ್ಲದೆ ಸುಳ್ಯ ಶಾಸಕರು ಹಾಗೂ ಸಚಿವರಾದ ಎಸ್. ಅಂಗಾರ ಸಹಿತ ಸ್ಥಳೀಯ ಬಿಜೆಪಿ ಮುಖಂಡರು, ಹಿಂದೂಪರ ಸಂಘಟನೆ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter