ಪೊಳಲಿ ದೇವಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಭೇಟಿ
ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ರವಿಕುಮಾರ್ ನ.04ರಂದು ಶುಕ್ರವಾರ ಬೆಳಿಗ್ಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ನೂತನ ಜಿಲ್ಲಾಧಿಕಾರಿ ರವಿಕುಮಾರ್ ಅಧಿಕಾರ ಸ್ವೀಕರಿಸಿದ ಪ್ರಥಮ ಬಾರಿಗೆ ಪೊಳಲಿ ದೇವಳಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿದರು. ಇವರಿಗೆ ದೇವಳದ ವತಿಯಿಂದ ಅರ್ಚಕ ಪರಮೇಶ್ವರ ಭಟ್, ಅನಂತ ಭಟ್ ಪ್ರಸಾದ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಡಾ. ಮಂಜಯ ಶೆಟ್ಟಿ ಅಮುಂಜೆ ಗುತ್ತು, ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಹಾಗೂ ದೇವಳದ ಅರ್ಚಕರು ಉಪಸ್ಥಿತರಿದ್ದರು.

