ಕೊಯಿಲ: ಸರ್ಕಾರಿ ಪ್ರೌಢಶಾಲೆ ದತ್ತು ಸ್ವೀಕರಿಸಿ ಅಭಿವೃದ್ಧಿ: ಮಾಜಿ ಸಚಿವ ನಾಗರಾಜ ಶೆಟ್ಟಿ
ಬಂಟ್ವಾಳ: ತಾಲ್ಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ನಡೆದ ಕನ್ನಡ ರಾಜ್ಯೋತ್ಸವ ಮತ್ತು ಶಾಲೆ ದತ್ತು ಸ್ವೀಕಾರ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಮಾತನಾಡಿದರು.

ಕೊಯಿಲ ಸರ್ಕಾರಿ ಪ್ರೌಢಶಾಲೆಯನ್ನು ಮನ್ ದೇವ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ದತ್ತು ಸ್ವೀಕರಿಸಿ ಅಭಿವೃದ್ಧಿಗೊಳಿಸಲು ಮುಂದಾಗಿರುವುದಾಗಿ ಟ್ರಸ್ಟಿನ ಅಧ್ಯಕ್ಷ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಹೇಳಿದ್ದಾರೆ.
ಇಲ್ಲಿನ ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ನಡೆದ ಕನ್ನಡ ರಾಜ್ಯೋತ್ಸವ ಮತ್ತು ಶಾಲೆ ದತ್ತು ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಟ್ರಸ್ಟಿನ ಸಂಚಾಲಕ ವಿಜಯ ಕುಮಾರ್ ಚೌಟ, ಕಾರ್ಯದಶಿ ಸಬಿತಾ ಲವಿನಾ ಪಿಂಟೋ, ಶಾಲಾಭಿವೃದ್ಧಿ ಸಮಿತಿ ಸದಸ್ಯ ಹರೀಶ ಆಚಾರ್ಯ ಮತ್ತಿತರರು ಇದ್ದರು. ಮುಖ್ಯಶಿಕ್ಷಕಿ ಸೌಮ್ಯ ಎಚ್.ಸ್ವಾಗತಿಸಿ, ಶಿಕ್ಷಕಿ ಲವಿನಾ ಡಿಸೋಜ ವಂದಿಸಿದರು. ಶಿಕ್ಷಕ ಪ್ರವೀಣ ಕಾಮತ್ ಕಾರ್ಯಕ್ರಮ ನಿರೂಪಿಸಿದರು.