ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮಕ್ಕೆ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸಂದೇಶ ಶೆಟ್ಟಿ ಪೊಡುಂಬ ಚಾಲನೆ ನೀಡಿದರು. ಗ್ರಾ.ಪಂ.ಅಧ್ಯಕ್ಷ ಸತೀಶ ಪೂಜಾರಿ ಮತ್ತಿತರರು ಇದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕನ್ನಡ ಇತಿಹಾಸಕ್ಕೆ ತನ್ನದೇ ಆದ ವೈಶಿಷ್ಟ್ಯತೆ ಹೊಂದಿದೆ ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಡಾ.ಗಿರೀಶ ಭಟ್ ಅಜೆಕ್ಕಳ ಹೇಳಿದ್ದಾರೆ.
ಇಲ್ಲಿನ ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಚಾರಿತ್ರಿಕ ದಾಖಲೆಗಳಲ್ಲಿ ದಕ್ಷಿಣ ಕನ್ನಡದ ಇತಿಹಾಸ’ ಎಂಬ ವಿಷಯದ ಬಗ್ಗೆ ಶುಕ್ರವಾರ ನಡೆದ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಶ್ರೀನಿವಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಪ್ರೊ.ಕೃಷ್ಣಮೂರ್ತಿ ಅನಿಸಿಕೆ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ ಪೂಜಾರಿ ಅಳಕೆ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸಂದೇಶ ಶೆಟ್ಟಿ ಪೊಡುಂಬ ಮತ್ತಿತರರು ಇದ್ದರು. ಉಪನ್ಯಾಸಕರಾದ ಪ್ರೊ.ಹನುಮಂತಯ್ಯ ಜಿ.ಎಚ್. ಸ್ವಾಗತಿಸಿ, ಪ್ರೊ.ವಿನಯ್ ಎಂ.ಎಸ್. ವಂದಿಸಿದರು. ಪ್ರಜ್ವಲ್ ಕಾರ್ಯಕ್ರಮ ನಿರೂಪಿಸಿದರು.

