ಬಂಟ್ವಾಳ: ವಿದ್ಯಾರ್ಥಿಗಳಿಗೆ ಧ್ಯಾನ, ಬೆಂಬಲ
ಬಂಟ್ವಾಳ: ರಾಜ್ಯದಲ್ಲಿ ವಿದ್ಯಾರ್ಥಿಗಳ ಮಾನಸಿಕ ಸ್ ಹೆಚ್ಚಳ ಜೊತೆಗೆ ಜ್ಞಾಪಕ ಶಕ್ತಿ ವೃದ್ಧಿಸುವುದಕ್ಕಾಗಿ ಸರ್ಕಾರ ಸುತ್ತೋಲೆ ಹೊರಡಿಸಿದ ‘ಧ್ಯಾನ’ ಮಾಡಲು ಅವಕಾಶ ನೀಡಿರುವುದು ಶ್ಲಾಘನೀಯ.
ಕಳೆದ ಎರಡು ವರ್ಷಗಳ ಹಿಂದೆ ಕಾಣಿಸಿಕೊಂಡ ಕೊರೋನಾ ಭೀತಿ ಬಳಿಕ ಇಲ್ಲಿನ ದಡ್ಡಲಕಾಡು ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆ ಸೇರಿದಂತೆ ಹಲವೆಡೆ ಈಗಾಗಲೇ ಯೋಗ ಮತ್ತು ಧ್ಯಾನದಲ್ಲಿ ವಿದ್ಯಾರ್ಥಿಗಳು ಆಸಕ್ತಿ ವ್ಯಕ್ತಪಡಿಸಿದ್ದಾರೆ ಎಂದು ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ ಅಂಚನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.