ಕೈಕಂಬ: ಕಂದಾವರದ ಖಾಸಗಿ ಸಭಾಗೃಹವೊಂದರಲ್ಲಿ ಶುಕ್ರವಾರ ಸಂಜೆ ಶಾಸಕ ಭರತ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಗುರುಪುರ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕಾರಿಣಿ ಸಭೆ ನಡೆಯಿತು.

ಡಾ. ಭರತ್ ಶೆಟ್ಟಿ ಮಾತನಾಡಿ, ಚುನಾವಣೆ ಹತ್ತಿರ ಇರುವುದರಿಂದ ಪಕ್ಷ ಬಲವರ್ಧನೆ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಹೆಚ್ಚು ಸಕ್ರಿಯರಾಗಬೇಕು. ನಾಗರಿಕ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವಾಗಬೇಕು ಎಂದರು.

ಸಭೆಯಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸೋಹನ್ ಅತಿಕಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ಮಂಡಲ ಕೋಶಾಧಿಕಾರಿ ಪುಷ್ಪರಾಜ್ ಮುಕ್ಕ, ಉಪಾಧ್ಯಕ್ಷೆ ಅಮೃತಲಾಲ್ ಡಿ’ಸೋಜ, ಮಂಡಲ ಕಾರ್ಯದರ್ಶಿ ಶೋಧನ್ ಆದ್ಯಪಾಡಿ, ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ರಾಜೇಶ್ ಗುರುಪುರ, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಹಾಗೂ ವಿವಿಧ ಮೋರ್ಚಾ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *