ಬಂಟ್ವಾಳ: ಬಿ.ಸಿ.ರೋಡಿಗೆ ಆಗಮಿಸಿದ ಮೃತ್ತಿಗೆ ಸಂಗ್ರಹ ಅಭಿಯಾನ ರಥ
ಬಟ್ವಾಳ ತಾಲ್ಲೂಕಿನ ಬಿ.ಸಿ.ರೋಡಿಗೆ ಶನಿವಾರ ಸಂಜೆ ಆಗಮಿಸಿದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ ಪ್ರಯುಕ್ತ ಮೃತ್ತಿಕೆ ಸಂಗ್ರಹ ಅಭಿಯಾನ ಸಭಾ ಕಾರ್ಯಕ್ರಮಕ್ಕೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಚಾಲನೆ ನೀಡಿದರು.
ಈ ಹಿಂದೆ ಗುಜರಾತಿನಲ್ಲಿ ಸರ್ದಾರ್ ವಲ್ಲಭ ಭಾಯಿ ಪಟೇಲರ ಪ್ರತಿಮೆ ಅನಾವರಣಗೊಳಿಸಿ ಪ್ರವಾಸಿ ತಾಣವನ್ನಾಗಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ೧೧ರಂದು ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣಗೊಳಿಸುವ ಮೂಲಕ ರಾಜ್ಯದ ಜನತೆಗೆ ಹೆಮ್ಮೆ ಮೂಡಿಸಲಿದ್ದಾರೆ ಎಮದು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಹೇಳಿದರು.
ಇಲ್ಲಿನ ಬಿ.ಸಿ.ರೋಡು ಆಡಳಿತ ಸೌಧ ಎದುರು ಶನಿವಾರ ಸಂಜೆ ಆಗಮಿಸಿದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ ಪ್ರಯುಕ್ತ ಮೃತ್ತಿಕೆ ಸಂಗ್ರಹ ಅಭಿಯಾನ ರಥ ಸ್ವಾಗತಿಸಿ ಅವರು ಮಾತನಾಡಿದರು.
ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷ ಪ್ರೊ.ಕೆ.ತುಕಾರಾಮ ಪೂಜಾರಿ ಮಾತನಾಡಿ, ಜಿಲ್ಲೆಯಲ್ಲಿ ನಡೆದ ಪ್ರಥಮ ಸ್ವಾತಂತ್ರö್ಯ ಸಂಗ್ರಾಮ ಸೇರಿದಂತೆ ಪೋರ್ಚುಗೀಸರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕ ಮಾತ್ರವಲ್ಲದೆ ಬೆಂಗಳೂರಿನ ಶಿಲ್ಪಿ ನಾಡಪ್ರಭು ಕೆಂಪೇಗೌಡರ ಸಾಹಸಗಾಥೆ ಯುವಜನತೆಗೆ ತಿಳಿಸುವ ಅಗತ್ಯವಿದೆ ಎಂದು ಹೇಳಿದರು.
ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ತಹಶೀಲ್ದಾರ್ ಡಾ. ಸ್ಮಿತಾ ರಾಮು ಇದ್ದರು. ತಾಲ್ಲೂಕು ಪಂಚಾಯಿತಿ ಇಒ ರಾಜಣ್ಣ ಸ್ವಾಗತಿಸಿ, ಕಂದಾಯ ನಿರೀಕ್ಷಕ ಜನಾರ್ದನ ವಂದಿಸಿದರು. ಉಪತಹಶೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು. ಇದೇ ವೇಳೆ ಆಕರ್ಷಕ ಮೆರವಣಿಗೆ ಮತ್ತು ಅಂಧ ಕಲಾವಿದರ ತಂಡದಿAದ ಸಂಗೀತ ಗಾಯನ ಕಾರ್ಯಕ್ರಮ ನಡೆಯಿತು.