Published On: Mon, Nov 7th, 2022

ಗಾಂಧಿ ಕುಟುಂಬಕ್ಕೆ ಸದ್ಯಕಿಲ್ಲ ಮುಕ್ತಿ – ರಾಹುಲ್, ಸೋನಿಯಾಗೆ ಮತ್ತೆ ED ಸಮನ್ಸ್?

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಿಂದ ಗಾಂಧಿ ಕುಟುಂಬಕ್ಕೆ ಸದ್ಯಕ್ಕೆ ಮುಕ್ತಿ ದೊರೆತಂತೆ ಕಾಣ್ತಿಲ್ಲ. ಕಾಂಗ್ರೆಸ್ ಒಡೆತನದ ಯಂಗ್ ಇಂಡಿಯನ್‌ನಲ್ಲಿ ಸಂಶಯಾಸ್ಪದ ವಹಿವಾಟುಗಳು ನಡೆದಿದ್ದು, ಜಾರಿ ನಿರ್ದೇಶನಾಲಯ (ED) ಮತ್ತೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿಯವರಿಗೆ ಸಮನ್ಸ್ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಶೆಲ್ ಕಂಪನಿಗಳ ಮೂಲಕ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸುಮಾರು 4 ರಿಂದ 5 ಕೋಟಿ ರೂ.ಗಳ ವಹಿವಾಟು ನಡೆದಿದೆ. ಈ ಹೇಳಿಕೆಯನ್ನು ಇ.ಡಿ (ED) ದಾಖಲಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಪವನ್ ಬನ್ಸಾಲ್, ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಯಂಗ್ ಇಂಡಿಯನ್‌ನ ಎಲ್ಲಾ ಪದಾಧಿಕಾರಿಗಳನ್ನು ಶೀಘ್ರದಲ್ಲೇ ವಿಚಾರಣೆಗೆ ಕರೆಸಲಾಗುತ್ತದೆ. ಜೊತೆಗೆ ಅನುಮಾನಾಸ್ಪದ ವಹಿವಾಟುಗಳಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ಇಟ್ಟುಕೊಂಡೇ ಅವರ ವಿಚಾರಣೆ ನಡೆಸಲು ಇಡಿ ನಿರ್ಧರಿಸಿದೆ. ಎಐಸಿಸಿ ಅಧ್ಯಕ್ಷ (AICC President) ಮಲ್ಲಿಕಾರ್ಜುನ ಖರ್ಗೆಗೂ ಸಮನ್ಸ್ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸೋನಿಗಾ ಗಾಂಧಿ ಹಾಗೂ ರಾಹುಲ್ ಗಾಂಧಿ ಯಂಗ್ ಇಂಡಿಯನ್‌ನಲ್ಲಿ ಹೆಚ್ಚಿನ ಷೇರು ಹೊಂದಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಡೆಯುತ್ತಿರುವ ತನಿಖೆಯ ಭಾಗವಾಗಿ ಆಗಸ್ಟ್‌ ಇಡಿ ದೆಹಲಿಯ ಯಂಗ್ ಇಂಡಿಯನ್ ಕಚೇರಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. 

ಹೆರಾಲ್ಡ್ ಹೌಸ್ ಕಟ್ಟಡದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ 6 ಗಂಟೆಗಳಿಗೂ ಹೆಚ್ಚು ಕಾಲ ಶೋಧ ನಡೆಸಲಾಗಿತ್ತು. ಸಂಸತ್ತಿನ ಅಧಿವೇಶನದ ಮಧ್ಯದಲ್ಲಿಯೇ ಮಲ್ಲಿಕಾರ್ಜುನ್ ಖರ್ಗೆಯವರಿಗೆ ಸಮನ್ಸ್ ಜಾರಿ ಮಾಡಿರುವ ಬಗ್ಗೆ ಕಾಂಗ್ರೆಸ್ ಪಕ್ಷ ಈ ಹಿಂದೆ ಆಕ್ರೋಶ ವ್ಯಕ್ತಪಡಿಸಿತ್ತು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter