ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಿ ಸನ್ನಿಧಿಯಲ್ಲಿ ಅಪ್ಪದ ಪೂಜೆ ಪ್ರಯುಕ್ತ ಏಕಾಹ ಭಜನೆಯು ನ.0೯ರಂದು ಬುಧವಾರ ಏಕಾಹ ಭಜನೆಗೆ ಚಾಲನೆ ನೀಡಲಾಯಿತು.

ದೇವಳದ ಅನುವಂಶಿಕ ಮೊಕ್ತೇಸರ ಪವಿತ್ರಪಾಣಿ ಮಾಧವಭಟ್ , ನಾರಾಯಣ ಭಟ್, ಕೆ.ರಾಮ್ ಭಟ್, ದೇವಳದ ಮೊಕ್ತೇಸರ ಚೇರ ಸೂರ್ಯನಾರಾಯಣ ರಾವ್ ಹಾಗೂ ದೇವಳದ ಕಾರ್ಯನಿರ್ವಹಣಾಧಿಕಾರಿ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಶ್ರೀ ರಾಜರಾಜೇಶ್ವರೀ ಭಜನಾ ಮಂಡಳಿ ಪೊಳಲಿ ಇವರಿಂದ ಭಜನಾ ಪ್ರಾರಂಭಗೊಂಡು ಮರುದಿನ ಗುರುವಾರ ಬೆಳಗ್ಗಿನವರೇಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆ ನಡೆಯಿತು.




