22ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ತೆರೆ
ಬಂಟ್ವಾಳ: 22ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿಯ ಭಾನುವಾರ ಸಂಜೆ ತೆರೆ ಬಿತ್ತು.
ಮಂಗಳೂರು ವಿವಿ ವಿಶ್ರಾಂತ ಪ್ರಾಧ್ಯಾಪಕ ಡಾ.ನರಸಿಂಹಮೂರ್ತಿ ಸಮಾರೋಪ ಭಾಷಣ ಮಾಡಿದರು. ಸಂತೆ, ಜಾತ್ರೆ, ಹಬ್ಬಗಳು ಬದುಕಿಗೆ ಪೂರಕವಾಗಿದ್ದು, ಸಾಹಿತ್ಯ ಸಮ್ಮೇಳನ ಹೊಸ ಪೀಳಿಗೆಯನ್ನು ತನ್ನತ್ತ ತೆರೆದುಕೊಳ್ಳುತ್ತಿದೆ ಎಂದರು.
ಸಮ್ಮೇಳನಾಧ್ಯಕ್ಷ ನಿವೃತ್ತ ಪ್ರಾಂಶುಪಾಲ ಪ್ರೊ.ಕೆ.ಬಾಲಕೃಷ್ಣ ಗಟ್ಟಿ ಅನಿಸಿಕೆ ವ್ಯಕ್ತಪಡಿಸಿದರು.

ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಂ.ಪಿ ಶ್ರೀನಾಥ, ಕಾರ್ಯದರ್ಶಿ ರಾಜೇಶ್ವರಿ, ತಾಲೂಕು ಕಾರ್ಯದರ್ಶಿಗಳಾದ ರಮಾನಂದ ನೂಜಿಪ್ಪಾಡಿ, ವಿ.ಸು.ಭಟ್, ನ್ಯಾಯವಾದಿ ಅಶ್ವನಿ ಕುಮಾರ್ ರೈ, ತಾಲೂಕು ಕಸಾಪ ಕೋಶಾಧಿಕಾರಿ ಅಬ್ದುಲ್ ರಹಿಮಾನ್ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಉಮೇಶ್ ಸಾಲ್ಯಾನ್ ಬೆಂಜನಪದವು, ಪ್ರಧಾನ ಕಾರ್ಯದರ್ಶಿ ಜನಾರ್ದನ ಅಮ್ಮುಂಜೆ, ಅಮ್ಮುಂಜೆ ಗ್ರಾಪಂ ಅಧ್ಯಕ್ಷ ವಾಮನ ಆಚಾರ್ಯ ಸ್ವಾಗತಿಸಿದರು.
ಪ್ರಧಾನ ಸಂಚಾಲಕ ಅಬುಬಕ್ಕರ್ ಅಮ್ಮುಂಜೆ ಸ್ವಾಗತಿಸಿದರು. ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.