ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಧಮ್ಕಿ ಹಾಗೂ ದೌರ್ಜನ್ಯಕ್ಕೆ ತೀವ್ರ ಖಂಡನೆ: ಬೇಬಿ ಕುಂದರ್
ಬಂಟ್ವಾಳ: ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಹಾಗೂ ಬಾಣಂತಿಯರಿಗೆ ಪೌಷ್ಠಿಕ ಆಹಾರ ವಿತರಿಸುವ ಅಕ್ಕಿಯಲ್ಲಿ ಹುಳ ಹಾಗೂ ಗುಗ್ಗುರು ಇರುವುದು ಸಾಕ್ಷಿ ಸಮೇತ ಪತ್ರಿಕೆ ಹಾಗೂ ದೃಶ್ಯ ಮಾದ್ಯಮದಲ್ಲಿ ಪ್ರಕಟಣೆಯಾಗಿತ್ತು.
ಈ ವಿಚಾರದ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಕೂಲಂಕುಷವಾಗಿ ತನಿಖೆ ನಡೆಸಿ ಮುಂದಿನ ದಿನಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಅಂಗನವಾಡಿ ಕೇಂದ್ರಗಳಿಗೆ ವಿತರಿಸುವಂತೆ ಮಾಜಿ ಸಚಿವ ಬಿ.ರಮಾನಾಥ ರೈಯವರು ಒತ್ತಾಯಿಸಿದ್ದರು.
ಈ ಪ್ರಕರಣದ ನಂತರ ಕುಕ್ಕಿಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರು ಅಂಗನವಾಡಿ ಕಾರ್ಯಕರ್ತೆಯರನ್ನು ಮತ್ತು ಸಹಾಯಕಿಯರನ್ನು ಪಂಚಾಯತ್ ಕಛೇರಿಗೆ ಕರೆಸಿ ತರಾಟೆಗೆ ತೆಗೆದುಕೊಂಡು ಅವಾಚ್ಯ ಶಭ್ದಗಳಿಂದ ನಿಂದಿಸಿ ಬೆದರಿಕೆ ಒಡ್ಡಿದ್ದನ್ನು ತೀವ್ರವಾಗಿ ಖಂಡಿಸುತ್ತೇವೆ. ಅಂಗನವಾಡಿ ಕೇಂದ್ರಕ್ಕೆ ಆಹಾರವನ್ನು ವಿತರಿಸುವ ವಿಚಾರದಲ್ಲಿ ಗಂಭೀರತೆಯನ್ನು ಕಾಯ್ದುಕೊಂಡು ಪುಟಾಣಿ ಮಕ್ಕಳ ಆರೋಗ್ಯ ಕಾಪಾಡುವಲ್ಲಿ ಯಾವುದೇ ರೀತಿಯ ರಾಜಕೀಯ ಮಾಡದೆ ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಅಂಗನವಾಡಿ ಕೇಂದ್ರಗಳಿಗೆ ವಿತರಿಸಲು ಸಂಬAಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಈ ಮೂಲಕ ಆಗ್ರಹಿಸುತ್ತೇವೆ.