ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಮತ್ತು ಅವರ ಪುತ್ರಿ ಕವಿತಾ ಕಲ್ವಕುಂಟ್ಲಾ ಅವರ ಬಗ್ಗೆ ಮಾತನಾಡಿದರೆ ನಾಲಿಗೆ ಕತ್ತರಿಸುತ್ತೇನೆ ಎಂದು ಬಿಜೆಪಿ ಸಂಸದ ಅರವಿಂದ್ ಧರಂಪುರಿ ವಿರುದ್ಧ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‍ಸಿ ಶಂಬಿಪುರ ರಾಜು ಆಕ್ರೋಶ ಹೊರಹಾಕಿದ್ದಾರೆ.

ಕವಿತಾ ಅವರನ್ನು ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ಸಿಎಂ ಹೇಳಿಕೆ ನೀಡಿದ ಬೆನ್ನಲ್ಲೇ ಅರವಿಂದ್ ಧರಂಪುರಿ ಅವರು, ಬಿಆರ್‌ಎಸ್ ಪಕ್ಷದಲ್ಲಿ ಎಂಎಲ್‍ಸಿ ಕವಿತಾ ಅವರು ಅತೃಪ್ತರಾಗಿದ್ದು, ಕಾಂಗ್ರೆಸ್ ಸೇರಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದರು.

ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಂಬಿಪುರ ರಾಜು ಅವರು, ರಾಜಕೀಯ ಮೌಲ್ಯ ಮರೆತು ಮುಖ್ಯಮಂತ್ರಿ ಕೆಸಿಆರ್ ವಿರುದ್ಧ ಅಗೌರವವಾಗಿ ಮಾತನಾಡಿದರೆ ಅರವಿಂದ್ ಧರ್ಮಪುರಿ ಅವರ ನಾಲಿಗೆ ಕತ್ತರಿಸುತ್ತೇನೆ ಎಂದು ಅರವಿಂದ್ ಧರ್ಮಪುರಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೊಡ್ಡವರ ಬಗ್ಗೆ ಮಾತನಾಡುವುದರಿಂದ ತಾನೂ ದೊಡ್ಡವನಾಗುತ್ತೇನೆ ಎಂದುಕೊಂಡಿದ್ದಾರೆ. ಬಿಜೆಪಿ ನಾಯಕರಾಗಿರುವ ನೀವೇ, ಕವಿತಾ ಅವರಿಗೆ ಕರೆ ಮಾಡಿದ್ದಾರೆ ಎಂದು ಕಾಂಗ್ರೆಸ್‍ನಿಂದ ಯಾರೋ ಕರೆ ಮಾಡಿ ತಿಳಿಸಿದರು ಎನ್ನುತ್ತಿದ್ದೀರಾ. ನೀವು ಬಿಜೆಪಿಯಲ್ಲಿಯೇ ಇದ್ದುಕೊಂಡು ಈ ಬಗ್ಗೆ ಹೇಳುವುದಕ್ಕೆ ನಿಮಗೆ ನಾಚಿಕೆಯಾಗುವುದಿಲ್ಲವೇ? ಬಿಜೆಪಿಯವರಾಗಿರುವ ನೀವೇ ಇತರ ಪಕ್ಷದ ಸದಸ್ಯರೊಂದಿಗೆ ಸಂಪರ್ಕ ಹೊಂದಿರುವುದನ್ನು ಬಹಿರಂಗವಾಗಿ ಹೇಳುತ್ತಿದ್ದೀರಾ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

By Suddi9

Leave a Reply

Your email address will not be published. Required fields are marked *