ಕುಕ್ಕಿಪಾಡಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಬೆದರಿಕೆ, ಸುಳ್ಳು ಸುದ್ದಿ ಹರಡುವಿಕೆಗೆ ಖಂಡನೆ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ಪಷ್ಟನೆ
ಬಂಟ್ವಾಳ: ಇಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವೊಂದು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡುವ ನೆಪದಲ್ಲಿ ಅಲ್ಲಿನ ಅಕ್ಕಿಯಲ್ಲಿ ಹುಳ ಇದೆ ಎಂದು ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಅವರ ನಡೆ ಖಂಡನೀಯ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತ್ ಆರ್.ಪೂಜಾರಿ ಹೇಳಿದ್ದಾರೆ.
ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರನ್ನು ಗ್ರಾಮಸಭೆಗೆ ಕರೆಸಿ ವಿಚಾರಣೆ ನಡೆಸಿ ಬೆದರಿಕೆ ಹಾಕಲಾಗಿದೆ ಎಂದು ಮತ್ತೆ ಸುಳ್ಳು ಆರೋಪ ಮಾಡುವ ಮೂಲಕ ಮಹಿಳೆಗೆ ನಿಂದಿಸಿದ್ದಾರೆ. ಇಂತಹ ಸುಳ್ಳು ಸುದ್ದಿ ಮತ್ತು ಆರೋಪ ಮಾಡಿರುವ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಪ್ರಕಟಣೆಯಲ್ಲಿ ಅವರು ಎಚ್ಚರಿಸಿದ್ದಾರೆ.