ಮಂಗಳೂರು: ಕರ್ನಾಟಕದ (Karnataka) ಯುವ ಉದ್ಯಮಿಗಳು ಪುದುಚೇರಿಗೆ (Puducherry) ಬಂದು ಪ್ರವಾಸೋದ್ಯಮ, ಐಟಿ, ಎಲೆಕ್ಟ್ರಿಕ್ ವೆಹಿಕಲ್ ಮತ್ತಿತರ ಉದ್ಯಮವನ್ನು ಸ್ಥಾಪಿಸುವುದಾದರೆ ಸರ್ಕಾರ ಎಲ್ಲಾ ರೀತಿಯ ನೆರವು ಕಲ್ಪಿಸಲಾಗುವುದು ಎಂದು ಪುದುಚೇರಿ ಗೃಹಸಚಿವ ಎ. ನಮಸ್ಸಿವಾಯಂ (A. Namassivayam) ಹೇಳಿದರು.

ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಶ್ರೀ ಕಟೀಲೇಶ್ವರಿ ಕಲ್ಲಿದ್ದಲು ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದ ಅವರು, ಕಲ್ಲಿದ್ದಲು ಉದ್ಯಮದ ಕುರಿತು ಮಾಹಿತಿ ಪಡೆದುಕೊಂಡರು.

ಈ ವೇಳೆ ಮಾತನಾಡಿದ ಅವರು, ಪುದುಚೇರಿ ಸಣ್ಣ ರಾಜ್ಯವಾಗಿದ್ದು, ಅಂತಾರಾಷ್ಟ್ರೀಯ ಪ್ರವಾಸಿಗರನ್ನು ಹೆಚ್ಚೆಚ್ಚು ಆಕರ್ಷಿಸುತ್ತಿದೆ. ಪುದುಚೇರಿ ಸರ್ಕಾರ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ವಿದೇಶಿಗರೂ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಉಗ್ರ ಚಟುವಟಿಕೆಯ ಮೇಲೆ ಹದ್ದಿನ ಕಣ್ಣಿರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಕ್ಕೆ ಒತ್ತು, ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾಗೆ ಹೆಚ್ಚಿನ ಗಮನ ನೀಡಿದ್ದೇವೆ. ಅವರ ನಾಯಕತ್ವದಲ್ಲಿ ದೇಶವು ಉತ್ತಮ ಅಭಿವೃದ್ಧಿ ಹೊಂದುತ್ತಿದೆ ಎಂದು ನುಡಿದರು.

By suddi9

Leave a Reply

Your email address will not be published. Required fields are marked *