ಉಸಿರಾಟದ ತೊಂದರೆ; ನಟ ಉಪೇಂದ್ರ ಆಸ್ಪತ್ರೆಗೆ ದಾಖಲು
ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಉಪೇಂದ್ರ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ನೆಲಮಂಗಳ ಬಳಿ ಇರುವ ಹರ್ಷ ಆಸ್ಪತ್ರೆಗೆ ಉಪೇಂದ್ರ ದಾಖಲಾಗಿದ್ದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.
ಉಪೇಂದ್ರ ಅವರು ಸದ್ಯ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರು. ಯು ಐ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಈ ಸಿನಿಮಾದ ಫೈಟಿಂಗ್ ದೃಶ್ಯ ಸೆರೆಹಿಡಿಯಲಾಗುತಿತ್ತು. ಆಗ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ ಎನ್ನಲಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಸಿಲಾಗಿದೆ. ಸದ್ಯ ಉಪೇಂದ್ರ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಉಪೇಂದ್ರ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ ಎನ್ನುವ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಬೇಗ ಗುಣಮುಖರಾಗಲಿ ಪ್ರಾರ್ಥಿಸುತ್ತಿದ್ದಾರೆ.