ಮಂಚಕಲ್ಲು: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ
ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಮಂಚಕಲ್ಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಸರ್ಕಾರಿ ಶಾಲೆ ಉಳಿಸಿ ಅಭಿವೃದ್ಧಿಪಡಿಸಲು ಮಕ್ಕಳ ಪೋಷಕರ ಸಹಕಾರ ಅಗತ್ಯವಿದ್ದು, ಈ ಶಾಲೆ ಎದುರಿನ ರಸ್ತೆ ಬದಿ ಚರಂಡಿಗೆ ಮೋರಿ ಅಳವಡಿಸಲು ಸ್ಥಳೀಯ ಜನಪ್ರತಿನಿಧಿಗಳ ಗಮನ ಸೆಳೆಯಬೇಕು ಎಂದು ನಿವೃತ್ತ ಮುಖ್ಯಶಿಕ್ಷಕ ವಿನಯ ಕುಮಾರ್ ಜೈನ್ ಹೇಳಿದ್ದಾರೆ.
ಇಲ್ಲಿನ ಸಿದ್ಧಕಟ್ಟೆ ಸಮೀಪದ ಮಂಚಕಲ್ಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಅಮಿತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಸದಸ್ಯರಾದ ಶಾಂತ, ಶಕುಂತಳಾ, ನಿವೃತ್ತ ಶಿಕ್ಷಕಿ ನಾಗವೇಣಿ ಎಡಪದವು, ಪ್ರಮುಖರಾದ ಸುರೇಶ ಸಾಲ್ಯಾನ್, ಹೇಮಲತಾ ಮತ್ತಿತರರು ಇದ್ದರು. ಇದೇ ವೇಳೆ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮುಖ್ಯಶಿಕ್ಷಕಿ ವಿನಿತಾ ಸ್ವಾಗತಿಸಿ, ಸಹಶಿಕ್ಷಕಿ ಭವಾನಿ ವಂದಿಸಿದರು.