ಪೊಳಲಿಯಲ್ಲಿ ಜಿಲ್ಲಾ ಮಟ್ಟದ ಪ್ರಥಮ ಬಾರಿಗೆ ಜಂಪ್ ರೋಪ್ ಸ್ಪರ್ಧೆ
ಕೈಕಂಬ: ಬಂಟ್ವಾಳ ತಾಲೂಕಿನ ಸರಕಾರಿ ಪ್ರೌಢಶಾಲೆ ಪೊಳಲಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಥಮ ಬಾರಿಗೆ ಜಂಪ್ ರೋಪ್ ಸ್ಪರ್ಧೆಯು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ವೆಂಕಟೇಶ್ ನಾವಡ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ರಾಮಕೃಷ್ಣ ತಪೋವನ ಪೊಳಲಿ ಇವರು ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕರಾದ ರವಿಶಂಕರ್ ಆಗಮಿಸಿದ್ದರು. ಅತಿಥಿಗಳಾಗಿ ಯಶವಂತ ಪೂಜಾರಿ ಪ್ರೇಮನಾಥ ಶೆಟ್ಟಿ ನವೀನ್ ರತ್ನಾವತಿ ಸಂತೋಷ್ ಸುಬ್ರಾಯ ಕಾರಂತ್ ಉಪಸ್ಥಿತರಿದ್ದರು.
ಶಿಕ್ಷಣ ಸಂಯೋಜಕೀ ಪ್ರತಿಭಾ ಆಗಮಿಸಿ ಸರ್ವರನ್ನು ಶಾಲಾ ಮುಖ್ಯ ಶಿಕ್ಷಕ ರಾಧಾಕೃಷ್ಣ ಭಟ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಜಯಂತ್ ಆಚಾರ್ಯ ವಂದಿಸಿದರು. ಮುರಳಿದರ ಆಚಾರ್ಯ ಕಾರ್ಯಕ್ರಮ ನಿರೂಪಿಸಿ ರೋಟರಿ ಕ್ಲಬ್ ಬಂಟ್ವಾಳ ಸಹಕಾರ ನೀಡಿತು