ಬಂಟ್ವಾಳ: ತಾಲ್ಲೂಕಿನ ಸಜಿಪಮೂಡ ಗ್ರಾಮದ ಮುಗುಳಿಯ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವ ಪ್ರಯುಕ್ತ ಮಂಗಳವಾರ ಸಾಮೂಹಿಕ ಆಶ್ಲೇಷ ಬಲಿ ಪೂಜೆ ನೆರವೇರಿತು. ಮಾಗಣೆ ತಂತ್ರಿ ಸುಬ್ರಹ್ಮಣ್ಯ ಭಟ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ ಮತ್ತಿತರರು ಇದ್ದರು.

ಇಲ್ಲಿನ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಸೇರಿದಂತೆ ವಿವಿಧ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ಸೋಮವಾರ ಮತ್ತು ಮಂಗಳವಾರ ಪಂಚಮಿ ಉತ್ಸವ ಮತ್ತು ಷಷ್ಠಿ ಮಹೋತ್ಸವ ನಡೆಯಿತು. ಪೊಳಲಿ ಕ್ಷೇತ್ರದಲ್ಲಿ ಬೆಳ್ಳಿ ಮತ್ತು ಸಣ್ಣ ರಥೋತ್ಸವ, ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನ, ಸಜಿಪಮೂಡ ಮುಗಳಿಯ ಸುಬ್ರಹ್ಮಣ್ಯ ದೇವಸ್ಥಾನ, ಶಂಭೂರು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ, ಸಜಿಪನಡು ಸುಬ್ರಹ್ಮಣ್ಯ ದೇವಸ್ಥಾನ, ಸಜಿಪಪಡು ಅನ್ನಪಾಡಿ ಬಾಲಗಣಪತಿ ದೇವಸ್ಥಾನದಲ್ಲಿ ಷಷ್ಠಿ ಉತ್ಸವ ನೆರವೆರಿತು.

By suddi9

Leave a Reply

Your email address will not be published. Required fields are marked *