ತುಂಬೆ: ಆಟೋರಿಕ್ಷಾ ಪಲ್ಟಿ – ಇಬ್ಬರಿಗೆ ಗಾಯ
ಬಂಟ್ವಾಳ: ಆಟೋ ರಿಕ್ಷಾವೊಂದು ಪಲ್ಟಿಯಾದ ಕಾರಣ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ತುಂಬೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ರಿಕ್ಷಾ ತುಂಬೆ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಹಾಗೂ ಪ್ರಯಾಣಿಕ ಇಬ್ಬರೇ ಇದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.