ಮೂಡುಬಿದರೆ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ 87ನೇ ಶಾಖೆಯು ಶಿರ್ತಾಡಿಯ ಸೂರ್ಯ ಕಾಂಪ್ಲೆಕ್ಸ್ನಲ್ಲಿ ನವೆಂಬರ್ 24ರಂದು ಉದ್ಘಾಟನೆಗೊಳ್ಳಲಿದೆ.

download
ಬ್ಯಾಂಕ್ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ಸಚಿವ ಅಭಯಚಂದ್ರ ಜೈನ್ ಶಿರ್ತಾಡಿ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ, ಮೂಡುಬಿದರೆ ಎಂಸಿಎಸ್ ಬ್ಯಾಂಕ್ ಅಧ್ಯಕ್ಷ ಅಮರನಾಥ ಶೆಟ್ಟಿ ಗಣಕೀಕರಣ ವ್ಯವಸ್ಥೆ ಉದ್ಘಾಟಿಸಲಿದ್ದಾರೆ. ಕಲ್ಲಬೆಟ್ಟು ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಕೃಷ್ಣರಾಜ ಹೆಗ್ಡೆ ಭದ್ರತಾ ಕೋಶ ಉದ್ಘಾಟಿಸಲಿದ್ದಾರೆ.

ಶಿರ್ತಾಡಿ ಮೌಂಟ್ ಕಾರ್ಮಲ್ ಮಾತಾ ದೇವಾಲಯದ ಧರ್ಮಗುರು ಫಾ.ಫ್ರಾನ್ಸಿಸ್ ಕ್ರಾಸ್ತ, ಪೆರಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸತೀಶ ಕೆ.ಕಾಶಿಪಟ್ನ, ಬಾಗಲಕೋಟೆ ಕೃಷಿ ವಿಶ್ವವಿದ್ಯಾಲಯದ ನಿರ್ದೆಶಕ ಸಂಪತ್ ಸಾಮ್ರಾಜ್ಯ, ತಾ.ಪಂ.ಸದಸ್ಯ ರುಕ್ಕಯ್ಯ ಪೂಜಾರಿ, ನೆಲ್ಲಿಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಯುವರಾಜ್ ಹೆಗ್ಡೆ, ಶಿರ್ತಾಡಿ ಗ್ರಾ.ಪಂ. ಅಧ್ಯಕ್ಷ ಲಕ್ಷ್ಮಣ ಸುವರ್ಣ, ಲೂಸಿ ರೊನಾಲ್ಡ್ ಲೋಬೋ ಮುಖ್ಯ ಅತಿಥಿಗಳಾಗಿರುತ್ತಾರೆ.

ಶಿರ್ತಾಡಿ ಶಾಖೆಯು ಸಂಪೂರ್ಣ ಗಣಕೀಕೃತ, ಏಕಗವಾಕ್ಷಿ ಮತ್ತು ಕೋರ್ ಬ್ಯಾಂಕಿಂಗ್, ಆರ್ಟಿಜಿಎಸ್/ಎನ್ಇಎಫ್ಟಿ ಸೌಲಭ್ಯವನ್ನು ಹೊಂದಿರುವುದಾಗಿ ಬ್ಯಾಂಕ್ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ವ್ಯವಸ್ಥಾಪನಾ ನಿರ್ದೇಶಕ ಎಂ.ಗೋಪಾಲ ಕೃಷ್ಣ ಭಟ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *