ತಾ.ಪತ್ರಕರ್ತರ ಸಂಘದ ಅಧ್ಯಕ್ಷರಿಂದ ಕಾನೂನು ಕ್ರಮಕ್ಕಾಗಿ ಜಿಲ್ಲಾ ಎಸ್ ಪಿ ಗೆ ದೂರು.
ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ವ್ಯಕ್ತಿಯೋರ್ವನ ಮೇಲೆ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಅವರು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.

ಬಂಟ್ವಾಳ ತಾಲೂಕಿನ ಪತ್ರಕರ್ತರ ಸಂಘದ ಅಧ್ಯಕ್ಷ , ನಮ್ಮ ನ್ಯೂಸ್ ಚಾನೆಲ್ ನ ಮಾಲಕ ಪ್ರಶಾಂತ್ ಪುಂಜಾಲಕಟ್ಟೆ ಅವರ ಬಗ್ಗೆ ಬೆಳ್ತಂಗಡಿ ತಾಲೂಕಿನ ಕುಕ್ಕಳ , ಕೊಯಕ್ಕರಿ ನಿವಾಸಿ ಹೇಮಂತ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಕಿ ಗೌರವಕ್ಕೆ ದಕ್ಕೆ ಮಾಡಿದ್ದಾರೆ ಎಂದು ಅವರು ಎಸ್.ಪಿ.ಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಪ್ರಶಾಂತ್ ಪುಂಜಾಲಕಟ್ಟೆ ಅವರು ಡಿ.25 ರಂದು ಪುಂಜಾಲಕಟ್ಟೆಯಲ್ಲಿರುವ ಬಸವೇಶ್ವರ ದೇವಸ್ಥಾನದ ಅಧ್ಯಕ್ಷನಾಗಿ ಆಯ್ಕೆಯಾದ ಬೆನ್ನಲ್ಲೆ ಈ ಪೋಸ್ಟ್ ಹಾಕಿದ್ದು, ವೈಯಕ್ತಿಕ ತೇಜೋವದೆಗೆ ಪ್ರಯತ್ನಿಸುತ್ತಿದ್ದಾನೆ, ಇದರ ಜೊತೆಗೆ ಹತ್ತಾರು ವರ್ಷಗಳ ಇತಿಹಾಸವಿರುವ ಪ್ರಸಿದ್ದ ದೇವಸ್ಥಾನವಾದ ಬಸವೇಶ್ವರ ದೇವಸ್ಥಾನದ ಗೌರವವನ್ನು ಹಾಳುಮಾಡಲು ಪ್ರಯತ್ನ ಮಾಡಿದ್ದಾನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದು, ಈ ಬಗ್ಗೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯವರು ತನಿಖೆ ನಡೆಸಿ, ಈತನ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.
ಮನವಿಗೆ ಸ್ಪಂದಿಸಿದ ಎಸ್.ಪಿ.ಹೃಷಿಕೇಶ್ ಭಗವಾನ್ ಸೋನಾವಣೆ ಅವರು ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತವಾದ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
