ಬಂಟ್ವಾಳ ತಾಲೂಕು ಮಟ್ಟದ
ವಿಶ್ವ ಮಾನವ ದಿನಾಚರಣೆ
ಬಂಟ್ವಾಳ :ವಿಶ್ವ ಮಾನವ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆಯನ್ನುಬಂಟ್ವಾಳ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಇಂದು ಗುರುವಾರ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ವಿಶ್ವ ಮಾನವ ದಿನಾಚರಣೆಯಾಗಿ ಆಚರಿಸಲಾಯಿತು.

ಕೇಂದ್ರ ಸ್ಥಾನಿಯ ಶಿರಸ್ತೇದಾರ್ ನರೇಂದ್ರನಾಥ್ ಮಿತ್ತೂರು ಅವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ,ವಿಶ್ವ ಮಾನವತಾವಾದಿ ಕುವೆಂಪು ಅವರ ನಿಲುವುಗಳು ಎಲ್ಲಾ ಕಾಲಕ್ಕೂ ಪ್ರಸ್ತುತ. ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿಯ ಗರಿಯನ್ನು ತಂದುಕೊಟ್ಟ ಕುವೆಂಪು ಅವರ ಜನ್ಮ ದಿನವನ್ನು ವಿಶ್ವ ಮಾನವ ದಿನಾಚರಣೆಯಾಗಿ ಆಚರಿಸುವುದು ನಮ್ಮ ನಾಡಿಗೆ ಹೆಮ್ಮೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಉಪತಹಸೀಲ್ದಾರ್ ರಾಜೇಶ್ ನಾಯ್ಕ್ ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಆಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಸ್ವಾಗತಿಸಿ ವಂದಿಸಿದರು.