ಬಂಟ್ವಾಳ:ಇಲ್ಲಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕೊಯಿಲ ಸರ್ಕಾರಿ ಪ್ರೌಢಶಾಲೆ ಸಹಯೋಗದಲ್ಲಿ ಚಿತ್ರಕಲಾ ಶಿಕ್ಷಕ ಧನಂಜಯ ಇವರು ತರಬೇತಿ ನೀಡುವರು ಎಂದು ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ ಕುಮಾರ್ ಬೆಟ್ಟು ಹೇಳಿದರು.


ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಫ್ರೆಂಡ್ಸ್ ಸರ್ಕಲ್ ವತಿಯಿಂದ ಆರಂಭಗೊಂಡ ಚಿತ್ರಕಲಾ ತರಬೇತಿ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನಿಟಿ ಅವರು ಮಾತನಾಡಿದರು.
ಇದೇ ವೇಳೆ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು. ಸಂಘಟನೆ ಅಧ್ಯಕ್ಷ ಚಂದ್ರಶೇಖರ ಗೌಡ ಕಾರಂಬಡೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ ಗೌಡ, ಸಿ.ಎ.ಬ್ಯಾಂಕ್ ನಿರ್ದೇಶಕ ಹರೀಶ ಆಚಾರ್ಯ ರಾಯಿ, ಗ್ರಾಮ ಪಂಚಾಯಿತಿ ಸದಸ್ಯರಾದ ಉಷಾ ಸಂತೋಷ್ ಶಿವನಗರ, ಸಂತೋಷ್ ಗೌಡ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಪ್ ಗೌಡ ಮಿಯಾಲ್, ಪ್ರಮುಖರಾದ ಪ್ರಭಾಕರ ಗೌಡ, ಸುಮಿತ್ರ, ಸತೀಶ ಸಪಲ್ಯ, ಶಿಕ್ಷಕಿ ಗಾಯತ್ರಿ ದೇವಿ, ಜನೇಟಾ, ವಸಂತ್, ಸವಿತಾ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *