ಬಂಟ್ವಾಳ:ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮದಲ್ಲಿ ಪರಶುರಾಮ ಋಷಿ ತಪಸ್ಸು ಮಾಡಿದ ಪುಣ್ಯ ತಪೋಭೂಮಿ ಎಂದೇ ಗುರುತಿಸಿಕೊಂಡಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನ ಇದರ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಆಯ್ಕೆಯಾಗಿದ್ದಾರೆ.

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕ ಅಧ್ಯಕ್ಷರಾಗಿ ಉಚಿತ ಸಾಮೂಹಿಕ ವಿವಾಹ ಸೇರಿದಂತೆ ರಾಜ್ಯಮಟ್ಟದ ಕಬಡ್ಡಿ ಮತ್ತಿತರ ಸಾಮಾಜಿಕ, ಕ್ರೀಡೆ, ಧಾರ್ಮಿಕ ಚಟುವಟಿಕೆಯಲ್ಲಿ ಇವರು ತೊಡಗಿಸಿಕೊಂಡಿದ್ದಾರೆ.
