ರಾಯಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ
‘ಅರಿವು_2023’ ಮಾಹಿತಿ ಶಿಬಿರಕ್ಕೆ ಚಾಲನೆ
ಬಂಟ್ವಾಳ:ಗ್ರಾಮೀಣ ವಿದ್ಯಾರ್ಥಿಗಳು ಮತ್ತು ಮಕ್ಕಳ ಪೋಷಕರಿಗೆ ಶೈಕ್ಷಣಿಕ ಅರಿವು ಮೂಡಿಸುವ ಪ್ರಯತ್ನ ಶ್ಲಾಘನೀಯ ಎಂದು ಉದ್ಯಮಿ ರೂಪಾ ರಾಜೇಶ ಶೆಟ್ಟಿ ಹೇಳಿದ್ದಾರೆ.ಇಲ್ಲಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಯಿ ಸ್ವಾಮಿ ವಿವೇಕಾನಂದ ಫ್ರೆಂಡ್ಸ್ ಸರ್ಕಲ್ ಮತ್ತು ಬಂಟ್ವಾಳ ಜೆಸಿಐ ಘಟಕ ವತಿಯಿಂದ ಬುಧವಾರ ನಡೆದ ‘ಅರಿವು _2023’ ಮಾಹಿತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಬಂಟ್ವಾಳ ಜೆಸಿಐ ಘಟಕ ಅಧ್ಯಕ್ಷ ರಾಜೇಂದ್ರ ಕೆ., ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ, ವಿವೇಕಾನಂದ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷ ಚಂದ್ರಶೇಖರ ಗೌಡ ಕಾರಂಬಡೆ ಶುಭ ಹಾರೈಸಿದರು. ಸ್ವಾಮಿ ವಿವೇಕಾನಂದ ಫ್ರೆಂಡ್ಸ್ ಸರ್ಕಲ್ ಮತ್ತು ಬಂಟ್ವಾಳ ಜೆಸಿಐ ಘಟಕ ವತಿಯಿಂದ ಬುಧವಾರ ನಡೆದ “ಅರಿವು -2023” ಮಾಹಿತಿ ಶಿಬಿರ ಕಾರ್ಯಕ್ರಮಕ್ಕೆ ಸ್ಥಳೀಯ ಉದ್ಯಮಿ, ಕಂಬಳ ಪ್ರೋತ್ಸಾಹಕಿ ರೂಪ ರಾಜೇಶ್ ಶೆಟ್ಟಿ ಸೀತಾಳ ಇವರು ಚಾಲನೆ ನೀಡಿದರು.
ಜೆಸಿಐ ಘಟಕ ಪೂರ್ವಾಧ್ಯಕ್ಷ ಉಮೇಶ ಮೂಲ್ಯ, ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ ಗೌಡ ಗೋಳಿತಬೆಟ್ಟು, ಮಾಜಿ ಸದಸ್ಯೆ ಪುಷ್ಪಲತಾ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟ ಅಧ್ಯಕ್ಷ ಕೆ.ಪರಮೇಶ್ವರ ಪೂಜಾರಿ, ಪ್ರಮುಖರಾದ ಮಧುಕರ ಬಂಗೇರ, ಚಂದ್ರಾವತಿ ಲೋಕೇಶ್, ಶಿಕ್ಷಕಿ ಗಾಯತ್ರಿ ಭಟ್ ಮತ್ತಿತರರು ಇದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸಕ ಶಂಕರ್ ರಾವ್ ಮಾಹಿತಿ ನೀಡಿದರು.
ಮುಖ್ಯಶಿಕ್ಷಕ ಜಯರಾಮ ಪಡ್ರೆ ಸ್ವಾಗತಿಸಿ, ವಿವೇಕಾನಂದ ಫ್ರೆಂಡ್ಸ್ ಸರ್ಕಲ್ ಸ್ಥಾಪಕಾಧ್ಯಕ್ಷ ಹರೀಶ ಆಚಾರ್ಯ ರಾಯಿ ಪ್ರಾಸ್ತಾವಿಕ ಮಾತನಾಡಿದರು. ಜೆಸಿಐ ಕಾರ್ಯದರ್ಶಿ ರಶ್ಮಿ ಶೆಟ್ಟಿ ವಂದಿಸಿ, ನಿರೂಪಿಸಿದರು.