ಶ್ರೀ ದುರ್ಗೇಶ್ವರೀ ದೇವಿ ದೇವಸ್ಥಾನದಲ್ಲಿ ಮಹಿಳಾ ಭಕ್ತಾದಿಗಳಿಂದ ಕರಸೇವೆ
ಕೈಕಂಬ:ಕುಪ್ಪೆಪದವು ಶ್ರೀ ದುರ್ಗೇಶ್ವರೀ ದೇವಿ ದೇವಸ್ಥಾನದಲ್ಲಿ ಫೆಬ್ರವರಿ 9 ರಂದು ನಡೆಯುವ ಪುನಃ ಪ್ರತಿಷ್ಠೆ ಮತ್ತು 12 ರಂದು ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿ ಭರದಿಂದ ನಡೆಯುತ್ತಿದ್ದು, ಇದರ ಅಂಗವಾಗಿ ಕಿಲೆಂಜಾರು, ಕುಲವೂರು ಮತ್ತು ಮುತ್ತೂರು ಗ್ರಾಮಗಳ ಮಹಿಳಾ ಭಕ್ತಾದಿಗಳು ಮತ್ತು ಸಂಘ ಸಂಸ್ಥೆಗಳ ಸದಸ್ಯರಿಂದ ಕರಸೇವೆ ಶುಕ್ರವಾರ ರಾತ್ರಿ ನಡೆಯಿತು.