ಶ್ರೀ ಕ್ಷೇತ್ರ ಪೊಳಲಿಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಭೇಟಿ
ಪೊಳಲಿ: ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಜ.27ರಂದು ಶುಕ್ರವಾರ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಭೇಟಿ ನೀಡಿದರು. ದೇವಳದ ಅರ್ಚಕ ಅನಂತ ಭಟ್ ಪ್ರಸಾದ ನೀಡಿದರು.
ಶ್ರೀ ಕ್ಷೇತ್ರದ ವತಿಯಿಂದ ಕೆ.ಅಣ್ಣಾಮಲೈ ಅವರನ್ನು ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಹಲಾವಾರು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.