ಶ್ರೀದುರ್ಗೇಶ್ವರೀ ದೇವಿ ದೇವಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ಭೇಟಿ
ಕೈಕಂಬ: ಕುಪ್ಪೆಪದವು ಶ್ರೀದುರ್ಗೇಶ್ವರೀ ದೇವಿ ದೇವಸ್ಥಾನದಲ್ಲಿ ನಡೆಯುತ್ತಿರುವ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂದರ್ಭ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉತ್ತರ ಶಾಸಕ ಡಾ,ವೈ ಭರತ್ ಶೆಟ್ಟಿ ಇದ್ದರು.
ಮ್ಯಾನೇಜಿಂಗ್ ಟ್ರಷ್ಟಿ ಪ್ರವೀಣ್ ಕುಮಾರ್ ಅಗರಿ, ಪ್ರಧಾನ ಅರ್ಚಕ ವೇದಮೂರ್ತಿ ಸದಾಶಿವ ಕಾರಂತ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಜಗದೀಶ್ ಪಾಕಜೆ, ಕಾರ್ಯಾಧ್ಯಕ್ಷ ವಿನೋದ್ ಕುಮಾರ್ ಅಂಬೆಲೋಟ್ಟು, ಪ್ರಧಾನ ಕಾರ್ಯದರ್ಶಿ ಮಹಾಬಲ ಸಾಲ್ಯಾನ್, ಕೋಶಾಧಿಕಾರಿ ವಿನಯ ಕಾರಂತ, ಜತೆ ಕೋಶಾಧಿಕಾರಿಗಳಾದ ಹರೀಶ್ ಸುವರ್ಣ, ಅಶೋಕ್ ಕಟ್ಟೆಮಾರ್, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಅಜಿತ್ ಕುಮಾರ್ ಜೈನ್, ಪ್ರಧಾನ ಕಾರ್ಯದರ್ಶಿ ಅರ್ಜುನ್ ಪಂಡಿತ್, ಉಪಾಧ್ಯಕ್ಷರುಗಳಾದ ರಾಮಚಂದ್ರ ಸಾಲ್ಯಾನ್ ತಾಳಿಪಾಡಿ, ಧಾರ್ಮಿಕ ಮುಖಂಡರುಗಳು, ಭಕ್ತಾದಿಗಳು ಪಾಲ್ಗೊಂಡಿದ್ದರು.