ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ
ಬಂಟ್ವಾಳ: ಇಲ್ಲಿನ ತಾಲೂಕು ಮಟ್ಟದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆಯು ಬಂಟ್ವಾಳ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಭಾನುವಾರ ಆಚರಿಸಲಾಯಿತು.
ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಜಯಂತಿ ಆಚರಣೆಯನ್ನು ಚುನಾವಣೆ ಶಾಖೆಯ ವಿಷಯ ನಿರ್ವಾಹಕ ನಾರಾಯಣ ಗೌಡ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು ಶಾಂತಿ, ಸಹಬಾಳ್ವೆ ಮತ್ತು ಸಮಾನತೆಯ ಮಹತ್ವವನ್ನು ರೇಣುಕಾಚಾರ್ಯರು ಬಹಳಷ್ಟು ಹಿಂದೆಯೇ ಅರಿತಿದ್ದರು.
ಭೇಧ ಭಾವಗಳನ್ನು ತೊಡೆದು ಹಾಕಿ ಸಮಾಜದಲ್ಲಿ ಸಮಾನತೆಯನ್ನು ಸಾರಿದ ರೇಣುಕಾಚಾರ್ಯರರ ತತ್ವಗಳನ್ನು ಪಾಲಿಸಿದರೆ ಶಾಂತಿ ನೆಲೆಸುತ್ತದೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಆಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಸ್ವಾಗತಿಸಿ ವಂದಿಸಿದರು.