ಮಾ. 10 – 23 ರವರೆಗೆಕಾಂಗ್ರೆಸ್ ನಿಂದ “ಬಂಟ್ವಾಳ ಪ್ರಜಾಧ್ವನಿಯಾತ್ರೆ
ಬಂಟ್ವಾಳ: ಕಾಂಗ್ರೆಸ್ ಪಕ್ಷದ ವತಿಯಿಂದ ಬಂಟ್ವಾಳ ಕ್ಷೇತ್ರದ ಪ್ರತಿ ಗ್ರಾಮಗಳನ್ನು ತಲುಪುವ ‘ಬಂಟ್ವಾಳಪ್ರಜಾಧ್ವನಿಯಾತ್ರೆ’ ಮಾರ್ಚ್ 10 ರಿಂದ 23 ರವರೆಗೆ 14 ದಿನಗಳ ಕಾಲ ಕ್ಷೇತ್ರದಾದ್ಯಂತ ಸಂಚರಿಸಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಬುಧವಾರ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ನ ಐದು ವರ್ಷಗಳ ಶಾಸಕತ್ವದ ಅವಧಿಯಲ್ಲಿ ಸಿದ್ಧರಾಮಯ್ಯ ಸರಕಾರದ ಮೂಲಕ ಕ್ಷೇತ್ರದಾದ್ಯಂತ ಕೈಗೊಳ್ಳಲಾದ 5 ಸಾವಿರ ಕೋಟಿ ರೂ.ಗಳ ಅಭಿವೃದ್ದಿ ಕಾರ್ಯಗಳನ್ನು ಜನರಿಗೆ ತಿಳಿಸುವ ಕಾರ್ಯವನ್ನು ಯಾತ್ರೆ ಮೂಲಕ ಮಾಡಲಾಗುವುದು ಎಂದರು.
ಪ್ರತಿ ದಿನ ಮೂರು ಗ್ರಾಮ ಪಂಚಾಯತ್ ಗಳನ್ನು ಒಳಗೊಂಡಂತೆ ಯಾತ್ರೆಯನ್ನು ನಡೆಸಲಾಗುವುದು. ಪ್ರತಿ ದಿನ ಸಂಜೆ ಸಭೆ ನಡೆಸಲಾಗುತ್ತದೆ. ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ಪುಂಚಮೆಯಿಂದ ಯಾತ್ರೆ ಆರಂಭಗೊಳ್ಳಲಿದೆ.ಮಾ.23 ರಂದು ಮೊಗರ್ನಾಡಿನಲ್ಲಿ ಕೊನೆಗೊಳ್ಳಲಿದೆ.ಪಾದಯಾತ್ರೆ ಹಾಗೂ ವಾಹನದ ಮೂಲಕ ಸಂಚರಿಸಲಾಗುವುದು. ಪ್ರಮುಖ ಮುಖಂಡರು ಪ್ರತಿದಿನದ ಯಾತ್ರೆಯಲ್ಲಿ ಭಾಷಣಕಾರರಾಗಿ ಆಗಮಿಸಲಿದ್ದಾರೆ ಎಂದು ಹೇಳಿದರು.ಯಾತ್ರೆ ಸಂಚರಿಸಲಿರುವ ಮಾರ್ಗದ ಕುರಿತು ಕೆಪಿಸಿಸಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್ ಮಾಹಿತಿ ನೀಡಿದರು.
ಇನ್ನೊಬ್ಬರು ಮಾಡಿದ್ದನ್ನು ಹೇಳೋದಿಲ್ಲ:
ಇನ್ನೊಬ್ಬರು ಮಾಡಿದ ಕೆಲಸವನ್ನು ನಾನು ಮಾಡಿದ್ದು ಎಂದು ಎಲ್ಲೂ ಹೇಳುವುದಿಲ್ಲ ಎಂದು ಹೇಳಿದ ರಮಾನಾಥ ರೈ, ಬಂಟ್ವಾಳದ ಸಮಗ್ರ ಒಳಚರಂಡಿ ಯೋಜನೆ 2017ರ ಅಕ್ಟೋಬರ್ 10ರಂದು ನಾನು ಮಂಜೂರಾತಿ ಮಾಡಿಸಿದ್ದೇನೆ. ಇದಕ್ಕೆ ದಾಖಲಾತಿಯು ಇದ್ದು, ಆರು ವರ್ಷಗಳಾದರೂ ಕೆಲಸ ಆರಂಭವಾಗಿಲ್ಲ ಎಂದು ಹೇಳಿದರು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆ ತನ್ನ ಅವಧಿಯಲ್ಲಿ ಮಂಜೂರಾತಿ ಆಗಿದ್ದು ಎಂದು ನೆನಪಿಸಿದ ಅವರು, ಬಂಟ್ವಾಳ ತಾಲೂಕಿನ ಹೆಮ್ಮೆ ಎನಿಸಿದ ಪಂಜೆ ಮಂಗೇಶರಾಯರ ಸ್ಮಾರಕ ಭವನ ನಿರ್ಮಾಣಕ್ಕೆ ಎಂಟು ಕೋಟಿಗಳನ್ನು ಮಂಜೂರುಗೊಳಿಸಿ ಕೆಲಸ ಆರಂಭಿಸಲಾಗಿತ್ತು. ಇದುವರೆಗೂ ಅದರ ಕಾಮಗಾರಿ ಮುಗಿಸುವ ಪ್ರಯತ್ನ ಆಗಿಲ್ಲ ಹಾಗೆಯೇ ತಾಲೂಕು ಅಂಬೇಡ್ಕರ್ ಭವನ ಕೂಡ ಇನ್ನು ಉದ್ಘಾಟನೆ ಆಗಿಲ್ಲ ,
ಹಿಂದೆ ಮತೀಯ ಹೆಸರಲ್ಲಿ ನಡೆದ ಹತ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಯಾರು ಆರೋಪಿಗಳಾಗಿ ಗುರುತಿಸಿಲ್ಲ ಎಂದರು.
. ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ, ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಸುದರ್ಶನ ಜೈನ್, ಮಧುಸೂಧನ ಶೆಣೈ, ಅಬ್ಬಾಸ್ ಆಲಿ ಬಿ.ಎಂ., ಮಾಯಿಲಪ್ಪ ಸಾಲಿಯಾನ್. ಸುರೇಶ್ ಜೋರ,ಎಂ. ಚಂದ್ರಶೇಖರ ಪೂಜಾರಿ, ಚಂದ್ರಶೇಖರ ಭಂಡಾರಿ, ಸುಧಾಕರ ಶೆಣೈ ಖಂಡಿಗ ಉಪಸ್ಥಿತರಿದ್ದರು.