ಬಂಟ್ವಾಳ: ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ನೇಮಕ
ಬಂಟ್ವಾಳ: ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಉಮೇಶ್ ಬೋಳಂತೂರು ಇವರನ್ನು ನೇಮಕಗೊಳಿಸಿದೆ.

ಮಾಜಿ ಸಚಿವ ಬಿ.ರಮಾನಾಥ ರೈ ಶಿಫಾರಸ್ಸಿನ ಮೇರೆಗೆ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಮತ್ತು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಅವರು ನೇಮಕಗೊಳಿಸಿದ್ದಾರೆ. ಮಾಜಿ ಸಚಿವ ಬಿ.ರಮಾನಾಥ ರೈ ಅವರು ಲೊರೆಟ್ಟೋದಲ್ಲಿ ನಡೆದ ‘ಪ್ರಜಾಧ್ವನಿ ಯಾತ್ರೆ’ಯ ಸಮಾರೋಪದಲ್ಲಿ ಉಮೇಶ್ ಇವರಿಗೆ ಆದೇಶಪತ್ರ ಹಸ್ತಾಂತರಿಸಿ, ಶಾಲು ಹಾಕಿ ಅಭಿನಂದಿಸಿದರು.