ಋಷಿ ಪರಂಪರೆಯಿಂದ ಕೃಷಿ ದೇಶದ ಕೊಡುಗೆ: ಸುದರ್ಶನ್ ಮೂಡುಬಿದ್ರೆ
ಬಂಟ್ವಾಳ:ಋಷಿ ಪರಂಪರೆ ಮೂಲಕ ಬೆಳೆದು ಬಂದ ಕೃಷಿ ಪದ್ಧತಿಯನ್ನು ಭಾರತವು ಜಗತ್ತಿಗೆ ನೀಡಿದ ಬಹು ದೊಡ್ಡ ಕೊಡುಗೆಯಾಗಿದೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಕೂಡಾ ದೇಶಕ್ಕೆ ಕೃಷಿ ಕ್ಷೇತ್ರದ ಕೊಡುಗೆ ಅಪಾರ ಎಂಬುದು ಸಾಬೀತಾಗಿದೆ ಎಂದು ಜಿಲ್ಲಾ ಬಿಜೆಪಿ ಘಟಕ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ ಹೇಳಿದ್ದಾರೆ.
ಇಲ್ಲಿನ ಬಿ.ಸಿ.ರೋಡಿನಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಬಿಜೆಪಿ ರೈತ ಮೋರ್ಚಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಇಸ್ರೇಲ್ ಮಾದರಿ ಕೃಷಿ ಎಂದೇ ಗುರುತಿಸಿಕೊಂಡ ಇಸ್ರೆಲ್ ದೇಶಕ್ಕೂ ಭಾರತವೇ ಕೃಷಿಗೆ ಗುರು ಎಂದರು.ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಮಾತನಾಡಿ, ಕಳೆದ ಐದು ವರ್ಷಗಳ ಅವಧಿಯಲ್ಲಿ ನನಗೆ ಮತ ನೀಡಿದ ಎಲ್ಲಾ ಮತದಾರರಿಗೂ ನ್ಯಾಯ ನೀಡುವ ನಿಟ್ಟಿನಲ್ಲಿ ರೂ ೨ಸಾವಿರ ಕೋಟಿಗೂ ಮಿಕ್ಕಿ ವೆಚ್ಚದಲ್ಲಿ ವಿವಿಧ ರಸ್ತೆ ಮತ್ತು ಅಣೆಕಟ್ಟೆ ನಿರ್ಮಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ.
ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಖಾತೆಗಳಿಗೆ ಕಿಸಾನ್ ಸಮ್ಮಾನ್ ಮತ್ತು ಫಸಲ್ ಬಿಮಾ ಯೋಜನೆಯಡಿಗರಿಷ್ಟ ಪ್ರಮಾಣದಲ್ಲಿ ಅನುದಾನ ಒದಗಸಿದ್ದಾರೆ ಎಂದರು.ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮಾತನಾಡಿ, ಅಧಿಕಾರಕ್ಕಾಗಿ ಗ್ಯಾರಂಟಿ ಕಾರ್ಡ್ ನೀಡುವ ಕಾಂಗ್ರೆಸ್ ಅಧಿಕಾರಕ್ಕೆ ಬರುವುದೇ ಗ್ಯಾರಂಟಿ ಇಲ್ಲ ಎಂದರು.
ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸದಸ್ಯೆ ಸುಲೋಚನಾ ಜಿ.ಕೆ.ಭಟ್, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ರೈತ ಮೋರ್ಚಾ ಪ್ರಭಾರಿ ಕೇಶವ ಭಟ್ ಮುಳಿಯ, ಜಿಲ್ಲಾ ಸಂಯೋಕ ಈಶ್ವರ ಕಟೀಲು, ಜಿಲ್ಲಾ ಮಾಧ್ಯಮ ಪ್ರಮುಖ್ ಸಂದೇಶ್ ಶೆಟ್ಟಿ, ಬಂಟ್ವಾಳ ರೈತ ಮೋರ್ಚಾ ಅಧ್ಯಕ್ಷ ವಿಶ್ವನಾಥ ಪೂಜಾರಿ, ಮೂಡುಬಿದ್ರೆ ಘಟಕ ಅಧ್ಯಕ್ಷ ಸೋಮನಾಥ, ಬೆಳ್ತಂಗಡಿ ಘಟಕ ಅಧ್ಯಕ್ಷ ಜಯಂತ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತ ಕುಮಾರ್ ಅಣ್ಣಳಿಕೆ, ರಾಘವೇಂದ್ರ ಭಟ್, ಚುನಾವಣಾ ಪ್ರಭಾರಿ ರವಿಶಂಕರ್ ಮಿಜಾರು, ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಮತ್ತಿತರರು ಇದ್ದರು.
ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾಧಾಕೃಷ್ಣ ಬೆಳ್ಳೂರು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾ ಉಪಾಧ್ಯಕ್ಷ ಮಹೇಶ್ ಕುಮಾರ್ ಶೆಟ್ಟಿ ಮೇನಾಲ ವಂದಿಸಿದರು. ಬಂಟ್ವಾಳ ಮಂಡಲ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ ಮತ್ತು ರವೀಶ್ ಶೆಟ್ಟಿ ಕರ್ಕಳ ಕಾರ್ಯಕ್ರಮ ನಿರೂಪಿಸಿದರು.