ಕಾರ್ಕಳ: ಶ್ರೀ ವೆಂಕಟರಮಣ ಮಹಿಳಾ ಕಾಲೇಜು ಕಾರ್ಕಳ ಇವರ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರಿಂದ ಎಳ್ಳಾರೆಯ ಜಕ್ಕಲ್ ಪಾದೆಗೆ ಚಾರಣ ಮತ್ತು ಪ್ರಕೃತಿಯೊಂದಿಗೆ ಬದುಕು ಸಂವಾದ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಶಿವಮೊಗ್ಗ ಜಿಲ್ಲೆಯ ಗ್ರಾಮ ವಿಕಾಸ ಸಮಿತಿಯ ಸಂಯೋಜಕರಾದ ದೀಪಕ್ ಹುಲ್ಕುಳಿ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಉಷಾ ನಾಯಕ್,ಎನ್ನೆಸ್ಸೆಸ್ ಶಿಬಿರಾಧಿಕಾರಿ ಪದ್ಮಜಾ,ಕಡ್ತಲ ಗ್ರಾ.ಪಂ ಅಧ್ಯಕ್ಷರಾದ ಮಾಲತಿ ದಿನೇಶ್ ಕುಲಾಲ್, ಉಪಾಧ್ಯಕ್ಷರಾದ ಸತೀಶ್ ಪೂಜಾರಿ, ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆಯ ಸಂಸ್ಥಾಪಕರಾದ ದೇವೇಂದ್ರ ಕಾಮತ್,ನಿವೃತ್ತ ಯೋಧ ಸುಬೇದಾರ್ ರವೀಂದ್ರ ಕಾಮತ್ ಉಪಸ್ಥಿತರಿದ್ದರು.
ದೀಪಕ್ ಕಾಮತ್ ಎಳ್ಳಾರೆ ಕಾರ್ಯಕ್ರಮ ನಿರೂಪಿಸಿದರು.
