ಬಿ.ಸಿ.ರೋಡು: ಕಾಂಗ್ರೆಸ್ ‘ಮಾತೃ ಶಕ್ತಿ ಸಮಾವೇಶ ‘
ಬಂಟ್ವಾಳ:ಇಲ್ಲಿನ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ”ಮಾತೃ ಶಕ್ತಿ ಸಮಾವೇಶ ‘ ಇದೇ 2ರಂದು ಬೆಳಿಗ್ಗೆ 9 ಗಂಟೆಗೆ ಬಿ.ಸಿ.ರೋಡಿನ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ನಡೆಯಲಿದೆ.
ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆಯುವ ಈ ಸಮಾವೇಶದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಘಟಕ ಅಧ್ಯಕ್ಷೆ ಪುಷ್ಪಾ ಅಮರನಾಥ್, ರಾಜ್ಯ ವಕ್ತಾರೆ ಭವ್ಯ ನರಸಿಂಹ ಮೂರ್ತಿ , ಚುನಾವಣಾ ವೀಕ್ಷಕಿ ಶೀಬಾ ರಾಮಚಂದ್ರನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಎಸ್.ಗಟ್ಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕ ಅಧ್ಯಕ್ಷೆ ಶಾಲೆಟ್ ಪಿಂಟೋ, ಉಸ್ತುವಾರಿ ಅಪ್ಪಿ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ತಿಳಿಸಿದ್ದಾರೆ.