ರಾಯಿ: ಪ್ರಾಜೆಕ್ಟ್ ಕೋಡ್ ಉನ್ನತಿ ಸ್ವ-ಉದ್ಯೋಗ ಕೌಶಲ್ಯ ತರಬೇತಿ ‘ಮಹಿಳಾ ಸ್ವಾವಲಂಬನೆಗೆ ತರಬೇತಿ ಪೂರಕ’
ಬಂಟ್ವಾಳ:ಸರ್ಕಾರದ ವಿವಿಧ ಯೋಜನೆಯಡಿ ಮಹಿಳೆಯರು ಸ್ವಾಭಿಮಾನದ ಜೀವನ ನಡೆಸಲು ಸ್ವ ಉದ್ಯೋಗ ತರಬೇತಿ ದೊರೆತಾಗ ಸ್ವಾವಲಂಬನೆಗೆ ಪೂರಕವಾಗಲಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅದಿಕಾರಿ ಮಧು ಟಿ.ಎಲ್.ಹೇಳಿದ್ದಾರೆ.
ಇಲ್ಲಿನ ರಾಯಿ ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಇಲಾಖೆ, ಯು.ಎನ್.ಡಿ.ಪಿ ಪ್ರಾಜೆಕ್ಟ್ ಕೋಡ್ ಉನ್ನತಿ ಯೋಜನೆ ವತಿಯಿಂದ ಶನಿವಾರ ನಡೆದ ‘ಪ್ರಾಜೆಕ್ಟ್ ಕೋಡ್ ಉನ್ನತಿ ಸ್ವ-ಉದ್ಯೋಗ ಕೌಶಲ್ಯ ತರಬೇತಿ’ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯು ಎನ್ ಡಿ ಪಿ ಜಿಲ್ಲಾ ಸಂಯೋಜಕ ಶಿವಕುಮಾರ್ ಸ್ವಾಮಿ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.