ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ಬಿಜೆಪಿ ಚುನಾವಣಾ ಕಚೇರಿಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಭಾನುವಾರ ಭೇಟಿ ನೀಡಿದರು.


ಈ ಕ್ಷೇತ್ರದಲ್ಲಿ ಚುನಾವಣೆ ಎದುರಿಸಲು ಕೈಗೊಂಡ ಪೂರ್ವಸಿದ್ಧತೆ ಮತ್ತು ಚುನಾವಣಾ ತಂತ್ರಗಳ ಬಗ್ಗೆ ಅವರು ಚರ್ಚೆ ನಡೆಸಿದರು.
ಇದೇ ವೇಳೆ ಬಿಜೆಪಿ ಅಭ್ಯರ್ಥಿ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರಿಗೆ ಶುಭ ಹಾರೈಸಿದರು.


ಬೂಡ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಜಿಲ್ಲಾ ಮಾಧ್ಯಮ ಸಂಚಾಲಕ ಸಂದೇಶ್ ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಕಾನೂನು ಪ್ರಕೋಷ್ಟ ಜಿಲ್ಲಾ ಸಂಚಾಲಕ ಶ್ರೀಧರ್ ಶೆಟ್ಟಿ ಪುಳಿಂಚ, ಪ್ರಮುಖರಾದ ಪುರುಷೋತ್ತಮ ಶೆಟ್ಟಿ ವಾಮದಪದವು, ಪ್ರಕಾಶ್ ಅಂಚನ್, ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಯಶೋಧರ ಕರ್ಬೆಟ್ಟು, ಸೀತಾರಾಮ ಪೂಜಾರಿ, ಮಹೇಶ್ ಶೆಟ್ಟಿ ಜುಮಾದಿಗುಡ್ಡೆ, ಸುರೇಶ್ ಕೋಟ್ಯಾನ್, ಮನೋಜ್ ಜಾರಂದಗುಡ್ಡೆ, ಪ್ರಣಾಮ್ ರಾಜ್ ಅಜ್ಜಿಬೆಟ್ಟು, ಅಭಿಷೇಕ್ ಸರಪಾಡಿ , ಪವನ್‌ ಕುಮಾರ್‌ ಶೆಟ್ಟಿ ಮುತ್ತೂರು ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *