ಮೂಡುಬಿದಿರೆ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ನಾಮಪತ್ರ ಸಲ್ಲಿಕೆ
ಮೂಡುಬಿದಿರೆ: ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಮಂಗಳವಾರ ಆಡಳಿತ ಸೌಧದಲ್ಲಿ ನಾಮಪತ್ರ ಸಲ್ಲಿಸಿದರು.
ಮೂಡುಬಿದಿರೆ ವೆಂಕಟರಮಣ ದೇವಸ್ಥಾನ, ಹನುಮಂತ ದೇವಸ್ಥಾನ ಬಳಿಯಿಂದ ಮೆರವಣಿಗೆ ಮೂಲಕ ಸಾಗಿ ಬಂದು ಬಳಿಕ ನಾಮಪತ್ರ ಸಲ್ಲಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಜಿಲ್ಲಾಧ್ಯಕ್ಷ ಸುದರ್ಶನ್, ಮುಖಂಡರಾದ ಈಶ್ವರ ಕಟೀಲ್,ಕಸ್ತೂರಿ ಪೂಂಜ,ಸುನಿಲ್ ಆಳ್ವ,ಮೇಘನಾಥ ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು.
ಕ್ಷೇತ್ರದಾದ್ಯಂತ ಬಿಜೆಪಿ ಬೆಂಬಲಿಗರು ಭಾಗವಹಿಸಿದ್ದು ಬರುವವರಿಗೆ ಬಸ್ ಗಳ ವ್ಯವಸ್ಥೆ ಮಾಡಲಾಗಿತ್ತು. ಬೆಳಿಗ್ಗೆಯಿಂದಲೇ ಪೇಟೆ ತುಂಬಾ ಜನ ಜಮಾಯಿಸಿದ್ದು ವಾಹನಗಳಿಗೆ ಪರ್ಯಾಯ ರಸ್ತೆ ಸಂಪರ್ಕ ಕಲ್ಪಿಸಲಾಯಿತು.