ಸಂಗಬೆಟ್ಟು ಗ್ರಾ.ಪಂ.ಸದಸ್ಯೆ ಕಾಂಗ್ರೆಸ್ ಸೇರ್ಪಡೆ
ಬಂಟ್ವಾಳ: ತಾಲೂಕಿನ ಸಂಗಬೆಟ್ಟು ಗ್ರಾಮ ಪಂಚಾಯತ್ ಬಿ.ಜೆ.ಪಿ ಬೆಂಬಲಿತ ಸದಸ್ಯೆ ಶಾಂತಾ ಹಾಗೂ ಅವರ ಪತಿ ಉದಯ ಅವರು ಮಂಗಳವಾರ ಬಿ.ಸಿ.ರೋಡಿನಲ್ಲಿರುವ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿದರು.
ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ,ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಹಾಗೂ ಸಂಗಬೆಟ್ಟು ವಲಯ ಅಧ್ಯಕ್ಷರಾದ ದಿನೇಶ್ ಶೆಟ್ಟಿಗಾರ್ ಅವರು ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಚಿತ್ತರಂಜನ್ ಶೆಟ್ಟಿ, ಜನಾರ್ದನ್ ಚಂಡ್ತಿಮಾರ್,ಬೂತ್ ಅಧ್ಯಕ್ಷರಾದ ರಾಜೇಶ್ ಪೂಜಾರಿ, ಸುರೇಂದ್ರ ಶೆಟ್ಟಿ,ನಾರಾಯಣ ನಾಯ್ಕ, ಸಿದ್ಧಿಕ್ ಸರವು, ಸಿರಾಜ್ ಮದಕ ಉಪಸ್ಥಿತರಿದ್ದರು.