ಬಂಟ್ವಾಳ : ಪಾರದರ್ಶಕ ಆಡಳಿತ ವ್ಯವಸ್ಥೆಯನ್ನು ತರಲು ೧೮ವರ್ಷ ತುಂಬಿದ ಪ್ರತಿಯೊಬ್ಬರೂ ಕೂಡ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಬಂಟ್ವಾಳದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ.ಹೈದರ್ ಆಲಿ ಇವರು ತಿಳಿಸಿದರು. ಇವರು ಶ್ರೀ ವೆಂಕಟರಮಣಸ್ವಾಮಿ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ಘಟಕ ಹಾಗೂ ಮತದಾನ ಸಾಕ್ಷರತಾ ಕ್ಲಬ್‌ಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ “ಮತದಾರರ ಜಾಗೃತಿ ಕಾರ್ಯಕ್ರಮ”ದ ಸಂಪನ್ಮೂಲವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಾ ಮತದಾನದ ಮಹತ್ವವನ್ನು ಪ್ರಾತ್ಯಕ್ಷಿಕೆಯೊಂದಿಗೆ ಇದೇ ಮೊದಲ ಬಾರಿ ಮತದಾನ ಮಾಡುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಡಾ.ಸುಯೋಗ ವರ್ಧನ್ ಡಿ.ಎಮ್. ಇವರು ಯುವಸಮುದಾಯ ಸ್ವಯಂ ಮತದಾನದಲ್ಲಿ ಪಾಲ್ಗೊಳ್ಳುವುದರ ಜೊತೆಗೆ ಇತರರನ್ನೂ ಮತದಾನಕ್ಕೆ ಪ್ರೇರೇಪಿಸಲು ಕರೆನೀಡಿದರು.

ರಾಷ್ಟ್ರೀಯ ಸೇವಾಯೋಜನೆಯ ಕಾರ್ಯಕ್ರಮಾಧಿಕಾರಿಗಳಾದ ಡಾ.ಕಾಶೀನಾಥ ಶಾಸ್ತ್ರೀ ಹೆಚ್.ವಿ. ಇವರು ಸ್ವಾಗತಿಸಿ, ಮತದಾರ ಜಾಗೃತಿ ಸಾಕ್ಷರತಾ ಕ್ಲಬ್‌ನ ನೋಡಲ್ ಅಧಿಕಾರಿಗಳಾದ ಡಾ.ವಿನಾಯಕ ಕೆ.ಎಸ್. ಇವರು ವಂದಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

By suddi9

Leave a Reply

Your email address will not be published. Required fields are marked *