ಕೈಕಂಬ: ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ವ್ಯಕ್ತಿಯು ಮಂಗಳೂರಿನ ನೆಹರು ಮೈದಾನದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಕಂಡುಬಂದ ಹಿನ್ನೆಲೆಯಲ್ಲಿ , ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.


ಮೃತ ವ್ಯಕ್ತಿಯು ಪೊಳಲಿ ಸಮೀಪದ ಅಮ್ಮುಂಜೆ ನಿವಾಸಿ ಜನಾರ್ದನ ಬಾರಿಂಜೆ ಎಂದು ಗುರುತಿಸಲಾಗಿದೆ. ಮದ್ಯಾಹ್ನ
ಮಂಗಳೂರು ನೆಹರು ಮೈದಾನದಲ್ಲಿ ಕುಳಿತುಕೊಂಡಿದ್ದ ವೇಳೆ ಅವರ ಕೊಲೆಯಾಗಿದೆ ಎಂದು ಹೇಳಲಾಗುತ್ತಿದೆ.


ಕೊಲೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲವಾದರೂ ರಾಬರಿ ನಡೆಸಲು ಬಂದಿದ್ದ ವ್ಯಕ್ತಿಗಳಿಂದ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಜನಾರ್ದನ ಬಾರಿಂಜ ಅವರು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಸಕ್ರೀಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ.ವೃತ್ತಿಯಲ್ಲಿ ಚಾಲಕನಾಗಿದ್ದು ಎಲ್ಲರೊಂದಿಗೆ ಆತ್ಮಿಯರಾಗಿದ್ದ ಅವರು ಇಂದು ಬೆಳಗ್ಗೆ ಕೆಲಸಕ್ಕೆ ತೆರಳಿದ್ದರು ಮೃತರಿಗೆ ಪತ್ನಿ ಇಬ್ಬರು ಪುತ್ರರು ಇದ್ದಾರೆ.
ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಮಂಗಳೂರು ಪೋಲೀಸರು ಬಂಧಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

By suddi9

Leave a Reply

Your email address will not be published. Required fields are marked *