ಬಂಟ್ವಾಳ: ಕಾಂಗ್ರೆಸ್ ಚುನಾವಣಾ ಕಚೇರಿಗೆ ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರ ಭೇಟಿ
ಬಂಟ್ವಾಳ : ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರ ಬಿ.ಸಿ.ರೋಡಿನಲ್ಲಿರುವ ಚುನಾವಣಾ ಕಚೇರಿಗೆ ಶನಿವಾರ ಮಹಾರಾಷ್ಟ್ರ ವಿಧಾನ ಪರಿಷತ್ ಸದಸ್ಯ, ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರ ಭೇಟಿ ನೀಡಿದರು. ರಮಾನಾಥ ರೈ ಅವರ ಚುನಾವಣಾ ಪ್ರಚಾರ ಕಾರ್ಯ ನಿರ್ವಹಣೆಯ ಕುರಿತು ಅವರು ಚರ್ಚೆ ನಡೆಸಿದರಲ್ಲದರ ರೈ ಅವರಿಗೆ ಶುಭಕೋರಿದರು.

ಈ ವೇಳೆ ಕೆ.ಪಿ.ಸಿ.ಸಿ. ಸದಸ್ಯರುಗಳಾದ ಪಿಯೂಸ್ ಎಲ್. ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ಜಿ.ಪಂ. ಸದಸ್ಯ ಪದ್ಮಶೇಖರ್ ಜೈನ್, ಕಾಂಗ್ರೆಸ್ ಚುನಾವಣಾ ಕಚೇರಿ ಉಸ್ತುವಾರಿಗಳಾದ ನಾರಾಯಣ ನಾಯ್ಕ್, ಪರಮೇಶ್ವರ ಮೂಲ್ಯ, ಪ್ರಮುಖರಾದ ಜಗದೀಶ್ ಕೊಯಿಲ, ರಿಯಾಝ್ ಕೆಳಗಿನಪೇಟೆ ಮತ್ತಿತರರು ಉಪಸ್ಥಿತರಿದ್ದರು.