ಎ.30 ಕ್ಕೆ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಉಚಿತ ಸಾಮೂಹಿಕ ವಿವಾಹ
ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 39ನೇ ವರ್ಷಾಚರಣೆ ಪ್ರಯುಕ್ತ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ 15ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಹಾಗೂ ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಮತ್ತು ಸ್ವಸ್ತಿಸಿರಿ ರಾಜ್ಯಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಎ.30 ರಂದು ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದ ಸಭಾಂಗಣದಲ್ಲಿ ಜರಗಲಿದೆ ಎಂದು ಕ್ಲಬ್ ನ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ತಿಳಿಸಿದ್ದಾರೆ.

ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಒಳಾಂಗಣಕ್ರೀಡಾಂಗಣದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು
ಈ ಬಾರಿ ಒಟ್ಟು 11 ಜೋಡಿಗಳು ವೈವಾಹಿಕ ಜೀವನಕ್ಕೆ ಪಾದಾರ್ಪಣೆ ಮಾಡಲಿದೆ ಎಂದರು.
ಈ ಜೋಡಿಗಳಿಗೆ ಸಾಮೂಹಿಕವಾಗಿ ಈಗಾಗಲೇ ನಿಶ್ಚಿತಾರ್ಥವನ್ನು ನೆರವೇರಿಸಲಾಗಿದ್ದು, ವೇ.ಮೂ.ಶ್ರೀಕೃಷ್ಣ ಭಟ್ ಕಾರ್ಕಳ ಮತ್ತವರ ಅರ್ಚಕ ತಂಡದ ನೇತೃತ್ವದಲ್ಲಿ ವಿವಾಹ ಸಮಾರಂಭ ನೆರವೇರಲಿದೆ.ಇದುವರೆಗೆ ಕ್ಲಬ್ ನ ವತಿಯಿಂದ ನಡೆದ ಸಾಮೂಹಿಕ ವಿವಾಹದಲ್ಲಿ ಒಟ್ಟು 462 ಮಂದಿಗೆ ವಿವಾಹ ಮಾಡಲಾಗಿದೆ .ಬಡ, ಹಿಂದುಳಿದ ವರ್ಗದ ಜನತೆ ಅದ್ಧೂರಿಯ ವಿವಾಹ ನಡೆಸಲು ಅಸಾಧ್ಯವಾದ ಕಾರಣ ಸಾಮೂಹಿಕ ವಿವಾಹದ ಮೂಲಕ ವಿಜೃಂಭಣೆಯಲ್ಲಿ ವಿವಾಹ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.
ಇದಕ್ಕು ಮುನ್ನ ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಠಾರದಿಂದ ವಧು-ವರರ ದಿಬ್ಬಣ ಮೆರವಣಿಗೆ ವೈವಿಧ್ಯಮಯವಾಗಿ ಸಭಾಂಗಣಕ್ಕೆ ಸಾಗಿ ಬರಲಿದೆ ಎಂದರು.
ನವದೆಹಲೊ ಅನಾರೋಖ್ ಪ್ರೈ.ಲಿ.ನ ವೈಸ್ ಚೇಯರ್ ಮೆನ್ ಸಂತೋಷ್ ಜೆ.ಪಿ. ಕಾರ್ಯಕ್ರಮ ಉದ್ಘಾಟಿಸಲಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸಭಾಧ್ಯಕ್ಷತೆ ವಹಿಸಲಿದ್ದಾರೆ.ಸಂಸದ ನಳಿನ್ ಕುಮಾರ್ ಕಟಿಒಲ್ ಅವರು ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದು,ಬೆಳ್ತಂಗಡಿ ಶಾಸಕ ಹರೀಶ್ ಪುಇಂಜಾ ಸ್ವಸ್ತಿಕ್ ಸಂಭ್ರಮ್ ಪುರಸ್ಕಾರ ಪ್ರದಾನ ಮಾಡಲಿದ್ದಾರೆ.ಗಿತ್ತಿಗೆದಾರ ಪ್ರವೀಣ್ ಎಸ್.ದರ್ಭೆ ಅವರು ಮಂಗಲಸೂತ್ರ ವಿತರಿಸಲಿದ್ದಾರೆ ಹಲವಾರು ಗಣ್ಯರು ಅತಿಥಿಗಳಾಗಿ ಈ ಸಂದರ್ಭ ಭಾಗವಹಿಸಲಿದ್ದಾರೆ ಎಂದರು.
ಜಿಲ್ಲಾ ವೆನ್ ಲಾಕ್ ಆಸ್ಪತ್ರೆಯ ವೈದ್ಯರಾದ ಡಾ.ಸದಾನಂದ ಪೂಜಾರಿ (ವೈದ್ಯಕೀಯ),ವಿಜಯಕುಮಾರ್ ಕೊಡಿಯಾಲ್ ಬೈಲ್( ಕಲಾಕ್ಷೇತ್ರ) ಹಾಗೂಕಡಬ ಶ್ರೀನಿವಾಸ ರೈ ( ಯಕ್ಷಗಾನ ಕ್ಷೇತ್ರ) ಇವರಿಗೆ ಸ್ವಸ್ತಿಸಿರಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಹಾಗೂ ಪುಂಜಾಲಕಟ್ಟೆ ಆಸ್ಪತ್ರೆಯ ಆಶಾ ಕಾರ್ಯಕರ್ತೆಯರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು.
ಕ್ಲಬ್ ನ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಸಂಚಾಲಕ ರಾಜೇಶ್ ಬಂಗೇರ ಪುಳಿಮಜಲು, ಮಾಜಿ ಅಧ್ಯಕ್ಷರಾದ ಮಾಧವ ಬಂಗೇರ, ರತ್ನಾಕರ ಪಿ.ಎಂ., ಅಬ್ದುಲ್ ಹಮೀದ್
ಸುದ್ದಿಗೋಷ್ಠಿಯಲ್ಲಿದ್ದರು.