ವಿಧಾನಸಭಾ ಚುನಾವಣೆಯಲ್ಲಿ ೧೪೦ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಪ್ರಚಂಡ ಬಹುಮತ: ಮುಂಬೈ ಬಿಜೆಪಿ ಸಂಸದ ಗೋಪಾಲ ಶೆಟ್ಟಿ
ಕೈಕಂಬ:ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ೧೪೦ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ಜಯಭೇರಿ ಬಾರಿಸಲಿದ್ದಾರೆ. ಈ ಮೂಲಕ ರಾಜ್ಯದ ಜನತೆ ಪ್ರಧಾನಿ ಮೋದಿಯವರ ಆಡಳಿತ ಮತ್ತಷ್ಟು ಬಲಿಷ್ಠಗೊಳಿಸಲಿದ್ದಾರೆ ಎಂದು ಮುಂಬೈ ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಗೋಪಾಲ ಶೆಟ್ಟಿ ವಿಶ್ವಾಸ ವ್ಯಕ್ತಪಡಿಸಿದರು.
ಎ. ೨೬ರಂದು ಬಜ್ಪೆಯಲ್ಲಿ ನಡೆದ ಚುನಾವಣಾ ಪ್ರಚಾರದ ರೋಡ್ ಶೋ ಬಳಿಕ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ, ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ರಸ್ತೆ ಸಂಪರ್ಕ ಕ್ಷೇತ್ರದಲ್ಲಿ ದೇಶದ ಚಿತ್ರಣವನ್ನೇ ಬದಲಿಸಿದ್ದಾರೆ. ಕರ್ನಾಟಕದಲ್ಲೂ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಮೂಲ್ಕಿ-ಮೂಡಬಿದ್ರೆ ಕ್ಷೇತ್ರದ ಕೆಲವು ರಸ್ತೆಗಳು ಮಹಾರಾಷ್ಟçದ ರಸ್ತೆಗಳಿಗಿಂತಲೂ ಉತ್ತಮವಾಗಿವೆ. ಭರವಸೆಯ ಬಿಜೆಪಿ ಅಭ್ಯರ್ಥಿ ಉಮಾನಾಥಣ್ಣರಿಂದ(ಕೋಟ್ಯಾನ್) ಇದು ಸಾಧ್ಯವಾಗಿದೆ ಎಂದರು.
ಮೂಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಮಾತನಾಡಿ, ಚುನಾವಣೆ ವೇಳೆ ಕಳೆದ ಅವಧಿಯಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಸಲಾದ ಅಭಿವೃದ್ಧಿ ಕಾರ್ಯಗಳ ಪರಿಗಣಿಸಿ ಮತ್ತೊಂದು ಅವಧಿಗೆ ಅವಕಾಶ ನೀಡಿದರೆ, ಅಭಿವೃದ್ಧಿ ಕಾರ್ಯ ಇನ್ನಷ್ಟೂ ವಿಸ್ತರಿಸಲು ಸಾಧ್ಯವಾಗುತ್ತದೆ. ಅಧಿಕಾರಕ್ಕಾಗಿ ಹಪಹಪಿಸುವ ವಿಪಕ್ಷಗಳು ಸಾಮಾನ್ಯವಾಗಿ ಚುನಾವಣೆ ಹೊತ್ತಲ್ಲಿ ನಾನಾ ರೀತಿಯ ಆರೋಪ ಹೊರಿಸುತ್ತಿವೆ. ವದಂತಿಗಳ ಸತ್ಯಾಸತ್ಯತೆ ಕ್ಷೇತ್ರದ ಜನತೆಗೆ ಗೊತ್ತಿದೆ ಎಂದರು.
ಬಜ್ಪೆ ವಿಜಯ ವಿಠಲ ಮಂದಿರದಿAದ ಆರಂಭಗೊAಡು ಬಜ್ಪೆ ಚರ್ಚ್ನಿಂದ ಬಜ್ಪೆ ಜಂಕ್ಷನ್‌ವರೆಗೆ ಸಾಗಿ ಬಂದ ರೋಡ್ ಶೋ ಮೆರವಣಿಗೆಯಲ್ಲಿ ಮುಂಬೈ ಬಿಜೆಪಿ ಮುಖಂಡ ಹರೀಶ್ ಶೆಟ್ಟಿ ಎರ್ಮಾಳ್, ಜಿಲ್ಲಾ ಬಿಜೆಪಿ ಮುಖಂಡ ಈಶ್ವರ ಕಟೀಲ್, ಮಂಡಲ ಅಧ್ಯಕ್ಷ ಸುನಿಲ್ ಆಳ್ವ, ಪ್ರಧಾನ ಕಾರ್ಯದರ್ಶಿ ಕೇಶವ ಕರ್ಕೇರ, ಒಬಿಸಿ ಮೋರ್ಚಾ ಅಧ್ಯಕ್ಷ ರಾಜೇಶ್ ಅಮೀನ್(ಆರ್‌ಕೆ), ವಿವಿಧ ಬಿಜೆಪಿ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ನೂರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಮೂಡುಶೆಡ್ಡೆ ಸಭೆ :
ಮೂಡುಶೆಡ್ಡೆ ಜಂಕ್ಷನ್‌ನಲ್ಲಿ ಬುಧವಾರ ರಾತ್ರಿ ಆಯೋಜಿಸಲಾದ ಬಿಜೆಪಿ ಕಾರ್ಯಕರ್ತರ ಬೃಹತ್ ಸಭೆಯಲ್ಲಿ ಮೂಲ್ಕಿ-ಮೂಡಬಿದ್ರೆ ಮಂಡಲ ಅಧ್ಯಕ್ಷ ಸುನಿಲ್ ಆಳ್ವ ಮಾತನಾಡಿ, ಡಬಲ್ ಇಂಜಿನ್ ಸರ್ಕಾರ ಎಂದು ಅಪಹಾಸ್ಯ ಮಾಡುತ್ತಿದ್ದ ವಿಪಕ್ಷಗಳೇ ಈಗ ಮೋದಿ ಹಾಗೂ ಬೊಮ್ಮಾಯಿ ಆಡಳಿತ ವೈಖರಿ ಹೊಗಳುವಂತಾಗಿದೆ. ಅಭಿವೃದ್ಧಿ ಕಾರ್ಯಗಳ ಮೂಲಕ ಕ್ಷೇತ್ರದ ಮೂಲೆಮೂಲೆಯಲ್ಲೂ ಜನಮನ್ನಣೆ ಗಳಿಸಿರುವ ಕೋಟ್ಯಾನ್ ಅವರಿಂದ ಮೂಲ್ಕಿ-ಮೂಡಬಿದ್ರೆಯಲ್ಲಿ ಜನಪರ ತ್ರಿಬಲ್ ಇಂಜಿನ್ ಆಡಳಿತ ಮುಂದುವರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಭೆಯನ್ನುದ್ದೇಶಿಸಿ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಮಾತನಾಡಿ, ಈ ಭಾಗದಲ್ಲಿ ನಡೆದಿರುವ ಅಭೂತಪೂರ್ವ ಅಭಿವೃದ್ಧಿ ಕಾರ್ಯಗಳಿಗಾಗಿ ಇಲ್ಲಿನ ಜನತೆ ತನ್ನನ್ನು ಮತ್ತೊಂದು ಅವಧಿಗೆ ಬಿಜೆಪಿ ಅಭ್ಯರ್ಥಿಯಾಗಿ ಬೆಂಬಲಿಸಿದೆ. ಜನತೆಯ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕೆಲಸ ಮಾಡುವೆ ಎಂದರು.
ಬಿಜೆಪಿ ಮುಖಂಡ ಈಶ್ವರ ಕಟೀಲ್ ಅವರು ಕೋಟ್ಯಾನ್ ಅವರನ್ನು ಬೆಂಬಲಿಸಿ ಮತ ಯಾಚಿಸಿದರು. ಸಭೆಯಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ ಶೆಟ್ಟಿಗಾರ, ಕೇಶವ ಕರ್ಕೇರ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಅಭಿಲಾಷ್ ಶೆಟ್ಟಿ ಕಟೀಲ್, ಮುಖಂಡರಾದ ರಾಜೇಶ್ ಅಮೀನ್(ಆರ್‌ಕೆ), ಭುವನಾಭಿರಾಮ ಉಡುಪ, ರಮಾನಾಥ ಅತ್ತಾರ, ಜಯಂತ ಸಾಲ್ಯಾನ್, ದೇವಿಪ್ರಸಾದ್ ಪುನರೂರು, ಹರಿಪ್ರಸಾದ್ ಶೆಟ್ಟಿ ಮೂಡುಶೆಡ್ಡೆ, ಉಮೇಶ್ ಜಿ, ವಿವಿಧ ಪಕ್ಷ ಸಂಘಟನೆಯ ಮುಖಂಡರು, ಪದಾಧಿಕಾರಿಗಳು ಸದಸ್ಯರು ಹಾಗೂ ಪಕ್ಷ ಕಾರ್ಯಕರ್ತರು ಉಪಸ್ಥಿತರಿದ್ದರು.