ಅಡ್ಡೂರು ನೂಯಿ: ವಿವಾಹಿತ ನೇಣಿಗೆ ಶರಣು
ವಿವಾಹಿತನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡೂರು ಸಮೀಪದ ನೂಯಿ ಎಂಬಲ್ಲಿ ಶನಿವಾರ ನಡೆದಿದೆ.
ಭರತೇಶ(30) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ವೃತ್ತಿಯಲ್ಲಿ ಚಾಲಕನಾಗಿದ್ದ ಭರತೇಶ್ ಅಡ್ಡೂರು ಸಮೀಪದ ನೂಯಿ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ತನ್ನ ಪತ್ನಿಯೊಂದಿಗೆ ವಾಸವಿದ್ದ. 5 ವರ್ಷಗಳ ಹಿಂದೆ ಅಮ್ಮು0ಜೆಯ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದು, ಶುಕ್ರವಾರ ರಾತ್ರಿ ಊಟ ಮಾಡಿ ಮಲಗಿದ್ದ ಭರತೇಶ್ ರಾತ್ರಿ ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ. ಬಜಪೆ ಪೋಲೀಸರು ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.