ನಲ್ಕೆಮಾರ್ ಶಾಲೆಯಲ್ಲಿ ಬ್ಯಾಂಡ್ ವಾದ್ಯಗಳೊಂದಿಗೆ ವಿದ್ಯಾರ್ಥಿಗಳಿಗೆ ಸ್ವಾಗತ
ಬಿ.ಸಿ.ರೋಡ್: ಬಂಟ್ವಾಳ ತಾಲೂಕಿನ ನಲ್ಕೆಮಾರಿನ ದ.ಕ.ಜಿ.ಪ. ಉನ್ನತೀಕರಿಸಿದ ಸರಿಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾರಂಬೋತ್ಸವ ಬುಧವಾರ ನಡೆಯಿತು. ಬ್ಯಾಂಡ್ ವಾದ್ಯಗಳೊಂದಿಗೆ ೧ರಿಂದ ೫ನೇ ತರಗತಿ ವರೆಗಿನ ಮಕ್ಕಳನ್ನು ಮೆರವಣಿಗೆಯ ಮುಖಾಂತರ ಶಾಲಾ ಸಭಾಂಗಣಕ್ಕೆ ಕರೆದುಕೊಂಡು ಬರಲಾಯಿತು.

ಶಾಲಾಬಿವೃದ್ಧಿ ಸಮಿತಿ ಅಧ್ಯಕ್ಷ ವಿಜಯ್, ಶಾಲಾಭಿವೃದ್ಧಿ ಸಮಿತಿ ಸದಸ್ಯರ ಯೋಗೀಶ್ ಅಮ್ಟಾಡಿ, ಬಂಟ್ವಾಳ ಬಂಟರ ಸಂಘದ ಆಧ್ಯಕ್ಷ ಚಂದ್ರಹಾಸ ಶೆಟ್ಟಿ ಮತ್ತು ಮುಖ್ಯೋಪಾದ್ಯಾಯಿನಿ ಜ್ಯೋತಿ ಉಪಸ್ಥಿತರಿದ್ದರು.
ಶಾಲಾ ಶಿಕ್ಷಕಿಯರು ವಿದ್ಯಾರ್ಥಿಗಳಿಗೆ ಹೂ ಹಾಗೂ ಬಲೂನು ನೀಡಿ ಸ್ವಾಗತಿಸಿ ಆರತಿ ಎತ್ತಿ ಕುಂಕುಮ ಹಣೆಗಿಟ್ಟು ಸಭಾಂಗಣದಲ್ಲಿ ಕುಳ್ಳಿರಿಸಿದರು. ಸಭಾಕಾರ್ಯಕ್ರಮದಲ್ಲಿ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಲಾಯಿತು.