ಬಿ.ಸಿ.ರೋಡು: ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಸುತ್ತುಪೌಳಿ ಪುನರ್ ನವೀಕರಣಕ್ಕೆ ಶಿಲಾನ್ಯಾಸ
ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ರಾಷ್ತ್ರೀಯ ಹೆದ್ದಾರಿ ಸಮೀಪದ ಪೊಲೀಸ್ ಲೇನ್ ಪುರಾತನ ಪ್ರಸಿದ್ಧ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಮಹಾಗಣಪತಿ ಮತ್ತು ಶಾಸ್ತಾರ ಗುಡಿ ಸಹಿತ ಸುತ್ತುಪೌಳಿ ಪುನರ್ ನಿರ್ಮಾಣ ಕಾಮಗಾರಿಗೆ ಪೊಳಲಿ ರಾಮಕೃಷ್ಣ ತಪೋವನದ ವಿವೇಕ ಚೈತನ್ಯಾನಂದ ಸ್ವಾಮೀಜಿ ಸೋಮವಾರ ಶಿಲಾನ್ಯಾಸ ನೆರವೇರಿಸಿದರು.
ಅರವತ್ ಪದ್ಮನಾಭ ತಂತ್ರಿ, ವಾಸ್ತು ಶಿಲ್ಪಿ ಮಹೇಶ ಭಟ್ ಮುನಿಯಂಗಳ ಮಾರ್ಗದರ್ಶನದಲ್ಲಿ ಮುಖ್ಯ ಅರ್ಚಕ ಈಶ್ವರ ಭಟ್ ಮತ್ತಿತರರು ವಿವಿಧ ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು.
ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಮಾಜಿ ಸಚಿವ ಬಿ.ರಮಾನಾಥ ರೈ, ಡಿವೈಎಸ್ಪಿ ಪ್ರತಾಪ್ ಸಿಂಗ್ ಥೊರಾಟ್, ಆಡಳಿತ ಸಮಿತಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಸದಾನಂದ ಶೆಟ್ಟಿ ರಂಗೋಲಿ, ನಿವೃತ್ತ ಪೊಲೀಸ್ ಅಧಿಕಾರಿ ಆನಂದ ಮತ್ತಿತರರು ಇದ್ದರು.